ಮಡಿಕೇರಿ, ಜ. 20: ಪ್ರಾಕೃತಿಕ ವಿಕೋಪದಿಂದಾಗಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಆದಷ್ಟು ಶೀಘ್ರ ಮನೆ ನಿರ್ಮಾಣ ಮಾಡಿ ಹಸ್ತಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವದೆಂದು ಪ್ರಬಾರ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೊಡಗು ಜಿಲ್ಲೆಯಲ್ಲಿ ನೆರೆಹಾವಳಿ ಹಾಗೂ ಭೂಕುಸಿತದಿಂದ ಹಾನಿಗೊಳಗಾದ 840 ಕುಟುಂಬಗಳಿಗೆ ಪುನರ್ ವಸತಿ ಕಲ್ಪಿಸಲು ಎರಡು ಬೆಡ್ ರೂಂ ಮನೆಗಳನ್ನು ಪ್ರತಿ ಮನೆಗೆ ಅಂದಾಜು ರೂ.9.85 ಲಕ್ಷಗಳ ವೆಚ್ಚದಲ್ಲಿ ನಿರ್ಮಿಸಲು ಒಟ್ಟಾರೆ ಯೋಜನೆಗೆ ರೂ. 8274.00 ಲಕ್ಷಗಳ ಮೊತ್ತದಲ್ಲಿ ನಿರ್ವಹಿಸಲು ಸರ್ಕಾರದಿಂದ ತಾ. 27.11.2018ರಂದು ಅನುಮೋದನೆ ನೀಡಲಾಗಿದೆ. ಮನೆಗಳ ನಿರ್ಮಾಣ ಕಾಮಗಾರಿಯನ್ನು ನಿರ್ಮಾಣ ಸಂಸ್ಥೆಯಾದ ಕರ್ನಾಟಕ ರಾಜ್ಯ ಹ್ಯಾಬಿಟೇಟ್ (ಮೊದಲ ಪುಟದಿಂದ) ಕೇಂದ್ರಕ್ಕೆ ವಹಿಸಲಾಗಿದೆ. ಇದಲ್ಲದೆ, ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಕಾಮಗಾರಿಗಳಿಗೆ ಒಟ್ಟು ರೂ. 31.63 ಕೋಟಿಗಳನ್ನು ಮುಖ್ಯಮಂತ್ರಿ ಅವರ ಪರಿಹಾರ ನಿಧಿಯಿಂದ ಭರಿಸಲು ಸರ್ಕಾರವು ತಾ.5.12.2018ರಂದು ಅನು ಮೋದನೆ ನೀಡಿದೆ.

ಮನೆ ನಿರ್ಮಾಣದ ಅಂದಾಜು ವೆಚ್ಚದಲ್ಲಿ ಸಹಾಯ ಧನದ ಮೊತ್ತ (ವಿವಿಧ ವಸತಿ ಯೋಜನೆಗಳಡಿ ನೀಡಲಾಗುವ ಸಹಾಯಧನ) ರೂ. 1111.00 ಲಕ್ಷಗಳನ್ನು ಹಾಗೂ ಬಾಕಿ ರೂ. 7163.00 ಲಕ್ಷಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಭರಿಸಿ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಸಂಸ್ಥೆಗೆ ಬಿಡುಗಡೆ ಮಾಡಲು ಆದೇಶಿಸಲಾಗಿದೆ. ಮುಖ್ಯಮಂತ್ರಿ ಗಳು ತಾ.7-12-2018ರಂದು ಮನೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದ್ದಾರೆ.

ಕರ್ಣಂಗೇರಿ ಪ್ರದೇಶದಲ್ಲಿ ಪಾಯದ ಕಾಮಗಾರಿಯು ಮುಕ್ತಾಯ ಹಂತದಲ್ಲಿದ್ದು, ಆರ್.ಸಿ.ಸಿ. ಮನೆಯ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ ಮತ್ತು ಸಂಪೂರ್ಣ ಕಾಮಗಾರಿಯನ್ನು ಫೆಬ್ರವರಿ ತಿಂಗಳಲ್ಲಿ ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ.

ಮದೆಯಲ್ಲಿ ತಳಪಾಯ ಕಾಮಗಾರಿ ಪ್ರಗತಿಯಲ್ಲಿದ್ದು, ಮನೆ ನಿರ್ಮಾಣದ ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ. ಈ ಕಾಮಗಾರಿಯನ್ನು ಮಾರ್ಚ್ ತಿಂಗಳಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.

ಮಾದಾಪುರ ಪ್ರದೇಶದಲ್ಲಿ ತಳಪಾಯ ಕಾಮಗಾರಿಯು ಪ್ರಗತಿಯಲ್ಲಿದೆ.

ಓಃಅ &amdiv; IS ಅoಜe Pಡಿಚಿಛಿಣiಛಿe ಪ್ರಕಾರ ಮನೆಗಳ ಕಾಮಗಾರಿ ಗುಣಮಟ್ಟವನ್ನು ಕಾಯ್ದುಕೊಳ್ಳಲಾಗುತ್ತಿದೆ ಎಂದು ಲಕ್ಷ್ಮಿಪ್ರಿಯ ತಿಳಿಸಿದ್ದಾರೆ.