ಮಡಿಕೇರಿ, ಜ. 21: ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ (ತೆಂಕು, ಬಡಗು, ಬಡಾಬಡಗು, ಯಕ್ಷಗಾನ ಗೊಂಬೆಯಾಟ ಮತ್ತು ಘಟ್ಟದಕೋರೆ), ಮೂಡಲಪಾಯ, ಯಕ್ಷಗಾನ ತಾಳಮದ್ದಳೆ ಯಕ್ಷಗಾನ ಮತ್ತಿತರ ಕಲಾಪ್ರಕರಣಗಳಲ್ಲಿ 2018ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ (ಜನವರಿ 1 ರಿಂದ ಡಿಸೆಂಬರ್ 31 ರೊಳಗೆ) ಪ್ರಕಟಿಸಿರುವ ಪುಸ್ತಕಗಳನ್ನು ಪುಸ್ತಕ ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ.
2018ನೇ ಸಾಲಿನಲ್ಲಿ ಪ್ರಕಟವಾಗಿ ಆಯ್ಕೆಯಾದ ಪುಸ್ತಕಕ್ಕೆ ರೂ. 25 ಸಾವಿರಗಳ ಬಹುಮಾನವನ್ನು ನೀಡಲಾಗುವದು. ಯಕ್ಷಗಾನ ಮತ್ತು ಮೂಡಲಪಾಯ ಯಕ್ಷಗಾನದ ವಿವಿಧ ಆಯಾಮಗಳ ಬಗ್ಗೆ (ಸಂಗೀತ, ಅಭಿನಯ), ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಯಕ್ಷಗಾನ ಪ್ರಸಂಗ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ.