ಮಡಿಕೇರಿ, ಜ. 21: ಜಿಲ್ಲೆಯಲ್ಲಿ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಒಂದೇ ಸೂರಿನಡಿ ವೈದ್ಯಕೀಯ ಚಿಕಿತ್ಸೆ, ಪೊಲೀಸ್ ನೆರವು, ಕಾನೂನು ನೆರವು, ಸಮಾಲೋಚನೆ ಮತ್ತು ಮಹಿಳಾ ಸಹಾಯವಾಣಿ ಸೌಲಭ್ಯಗಳನ್ನು ಒದಗಿಸುವ ಸಲುವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆಯಲ್ಲಿರುವ “ಗೆಳತಿ ವಿಶೇಷ ಚಿಕಿತ್ಸಾ ಘಟಕ”ದಲ್ಲಿ ಮಾಹೆಯಾನೆ ರೂ. 15,000/- ಗೌರವಧನದ ಆಧಾರದ ಮೇಲೆ ಮಹಿಳಾ ಆಪ್ತ ಸಮಾಲೋಚಕರಾಗಿ ಕರ್ತವ್ಯ ನಿರ್ವಹಿಸಲು ಅರ್ಹರಿರುವ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಹತೆ ಎಂ.ಎಸ್.ಡಬ್ಲ್ಯೂ/ಎಂ.ಎ. (ಸೈಕಾಲಜಿ/ಸೋಷಿಯಾಲಜಿ) ಎಂಎಸ್ಸಿ (ಕೌನ್ಸಿಲಿಂಗ್ ಮತ್ತು ಸೈಕೋಥೆರಪಿ) ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು, ಒಂದು ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು ಹಾಗೂ ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸಲು ಸಿದ್ಧರಿರಬೇಕು. ಆಸಕ್ತಿಯಿರುವ ಅಭ್ಯರ್ಥಿಗಳು ಸ್ವ-ವಿವರಗಳನ್ನೊಳಗೊಂಡ ಅರ್ಜಿಯನ್ನು ಶೈಕ್ಷಣಿಕ ಪ್ರಮಾಣಪತ್ರಗಳೊಂದಿಗೆ ತಾ. 28 ರೊಳಗೆ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್ ಬಳಿ, ಮೈಸೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ-571 201 (ದೂರವಾಣಿ : 08272-298379) ಈ ವಿಳಾಸಕ್ಕೆ ನೀಡುವಂತೆ ತಿಳಿಸಲಾಗಿದೆ.