ಸೋಮವಾರಪೇಟೆ,ಜ.21: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕೂಡಿಗೆಯ ಡಯಟ್ ಮತ್ತು ಕ್ರೀಡಾಶಾಲಾ ಮೈದಾನದಲ್ಲಿ ತಾ. 22 ಮತ್ತು 23ರಂದು ನಡೆಸಲು ಉದ್ದೇಶಿಸಿದ್ದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳನ್ನು ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ ನಿಧನದ ಹಿನ್ನೆಲೆ ಮುಂದೂಡಲಾಗಿದೆ ಎಂದು ನೌಕರರ ಸಂಘದ ತಾಲೂಕು ಅಧ್ಯಕ್ಷ ಪ್ರಸನ್ನಕುಮಾರ್ ತಿಳಿಸಿದ್ದಾರೆ.

ಮುಂದೂಡಲ್ಪಟ್ಟ ಕ್ರೀಡಾಕೂಟವನ್ನು ತಾ. 24 ಮತ್ತು 25ರಂದು ಕೂಡಿಗೆಯಲ್ಲಿ ನಡೆಸಲಾಗುವದು ಎಂದು ಮಾಹಿತಿ ನೀಡಿದ್ದಾರೆ.

ಸಂತಾಪ: ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ನಿಧನಕ್ಕೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರಸನ್ನಕುಮಾರ್, ಜಿ. ಪಂ. ಮಾಜೀ ಅಧ್ಯಕ್ಷ ವಿ.ಎಂ. ವಿಜಯ ಅವರುಗಳು ಸಂತಾಪ ಸೂಚಿಸಿದ್ದಾರೆ.