ಮಡಿಕೇರಿ, ಜ. 21: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಇದೇ ಪ್ರಥಮ ಬಾರಿಗೆ ಹಮ್ಮಿಕೊಂಡಿರುವ ಮಹಿಳಾ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತಾ ಸಭೆ ಕಸಾಪ ಕಚೇರಿಯಲ್ಲಿ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಆಮಂತ್ರಣ ಪತ್ರಿಕೆ ತಯಾರಿ, ಅತಿಥಿಗಳ, ಸನ್ಮಾನಿತರ, ಗೋಷ್ಠಿಗಳಿಗೆ ಅಯ್ಕೆ ಸಂಬಂಧ ಚರ್ಚೆ ನಡೆದು ಅಂತಿಮಗೊಳಿಸಲಾಯಿತು. ಸಮ್ಮೇಳನ ಮುಂಬರುವ ಫೆ.3ರಂದು ಕಣಿವೆಯಲ್ಲಿ ನಡೆಯಲಿದೆ.

ಇದೇ ಸಂದರ್ಭದಲ್ಲಿ ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗಿರುವ ಕಸಾಪ ಜಿಲ್ಲಾ ನಿರ್ದೇಶಕ ಕೋಡಿ ಚಂದ್ರಶೇಖರ್ ಅವರನ್ನು ಅಭಿನಂದಿಸಲಾಯಿತು. ಕಸಾಪ ಮಡಿಕೇರಿ ತಾಲೂಕು ಅಧ್ಯಕ್ಷ ಕುಡೆಕಲ್ ಸಂತೋಷ್, ವೀರಾಜಪೇಟೆ ಅಧ್ಯಕ್ಷ ಮುಲ್ಲೇಂಗಡ ಮಧೋಶ್ ಪೂವಯ್ಯ, ಜಿಲ್ಲಾ ನಿರ್ದೇಶಕರಾದ ಪಿಲಿಫ್ ವಾಸ್, ತಳೂರು ಉಷಾರಾಣಿ ಇದ್ದರು.