ಸೋಮವಾರಪೇಟೆ, ಜ.21: ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಸಮಿತಿ ವತಿಯಿಂದ ವಿವೇಕಾನಂದ ಜಯಂತಿ ಅಂಗವಾಗಿ ತಾ. 23ರಂದು ತಾಲೂಕಿನ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಸಮಿತಿಯ ಕಾರ್ಯದರ್ಶಿ ಎಸ್. ಮಹೇಶ್ ತಿಳಿಸಿದ್ದಾರೆ.
ತಾ. 23ರಂದು ಪೂರ್ವಾಹ್ನ 10.30ಗಂಟೆಗೆ ಇಲ್ಲಿನ ಮಾನಸ ಸಭಾಂಗಣದಲ್ಲಿ ಸ್ಪರ್ಧೆಗಳು ನಡೆಯಲಿದ್ದು, 1ರಿಂದ 3ನೇ ತರಗತಿ ವಿದ್ಯಾರ್ಥಿಗಳಿಗೆ ‘ಪ್ರಕೃತಿ’ಯ ಚಿತ್ರ ಬಿಡಿಸುವದು, 4 ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಚಿತ್ರ ಬಿಡಿಸುವದು, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ಸ್ವಾಮಿ ವಿವೇಕಾನಂದರ ಮೇಲೆ ರಾಮಕೃಷ್ಣ ಪರಮಹಂಸರ ಪ್ರಭಾವ’ ವಿಷಯದ ಬಗ್ಗೆ ಪ್ರಬಂಧ, ಕಾಲೇಜು ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ ಸ್ಪರ್ಧೆಗಳು ನಡೆಯಲಿವೆ.
ಪ್ರತಿ ವಿಭಾಗದ ಸ್ಪರ್ಧೆಗೆ ಪ್ರತಿ ಶಾಲೆಯಿಂದ 3 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ತಾ.28ರಂದು ಪೂರ್ವಾಹ್ನ 11 ಗಂಟೆಗೆ ಮಾನಸ ಸಭಾಂಗಣದಲ್ಲಿ ನಡೆಯುವ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಗುವದು ಎಂದು ಮಹೇಶ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊ: 9448017656, 9481059223 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.