ಮಡಿಕೇರಿ, ಜ. 21: ಶ್ರೀ ಸಿದ್ಧಗಂಗಾ ಸ್ವಾಮೀಜಿಯವರು ಲಿಂಗೈಕ್ಯರಾಗಿರುವ ಹಿನ್ನೆಲೆಯಲ್ಲಿ ಗೌರವ ನಮನ ಸಲ್ಲಿಸುವ ಸಲುವಾಗಿ ಪತ್ರಿಕಾ ಭವನ ಟ್ರಸ್ಟ್ ಮತ್ತು ಕೊಡಗು ಜಿಲ್ಲಾ ಲೇಖಕ ಕಲಾವಿದರ ಬಳಗದ ವತಿಯಿಂದ ತಾ. 22 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ಪತ್ರಿಕಾ ಭವನದಲ್ಲಿ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿದೆ ಎಂದು ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಪ್ರಧಾನ ಕಾರ್ಯದರ್ಶಿ ವಿಲ್‍ಫ್ರೆಡ್ ಕ್ರಾಸ್ತ ಮತ್ತು ಕೊಡಗು ಪತ್ರಿಕಾ ಭವನ ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ಉಮೇಶ್ ಎಸ್.ಜೆ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ತಾ. 22 ರಂದು (ಇಂದು) ಬೆಳಿಗ್ಗೆ 10.45 ಗಂಟೆಗೆ ಕಸಾಪ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿದೆ ಎಂದು ಕಸಾಪ ಗೌರವ ಕಾರ್ಯದರ್ಶಿ ಕೆ.ಎಸ್. ರಮೇಶ್ ತಿಳಿಸಿದ್ದಾರೆ.