ಮಡಿಕೇರಿ, ಜ.22 : ತಾಳತ್ತಮನೆ ನೇತಾಜಿ ಯುವಕ ಮಂಡಲ ಹಾಗೂ ಯುವತಿ ಮಂಡಳಿ, ನೆಹರು ಯುವ ಕೇಂದ್ರ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಡಿಕೇರಿ ತಾಲೂಕು ಯುವ ಒಕ್ಕೂಟ ಇವರ ಸಂಯುಕ್ತಾಶ್ರಯದಲ್ಲಿ ಭಾರತದ ಮಹಾನ್ ಸ್ವಾತಂತ್ರ್ಯ ಯೋಧ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 122ನೇ ಜನ್ಮ ದಿನಾಚರಣೆ ಹಾಗೂ ನೇತಾಜಿ ಯುವಕ ಹಾಗೂ ಯುವತಿ ಮಂಡಲದ 27ನೇ ವಾರ್ಷಿಕೋತ್ಸವದ ಅಂಗವಾಗಿ ತಾ. 23 ರಂದು ತಾಳತ್ತಮನೆ ಆಟದ ಮೈದಾನದಲ್ಲಿ ಜಿಲ್ಲಾ ಮಟ್ಟದ ಮುಕ್ತ ಕ್ರೀಡಾ ಪಂದ್ಯಾವಳಿ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ.