ಮಡಿಕೇರಿ, ಜ. 22 : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪತ್ರಿಕೋದ್ಯಮ ಪದವೀಧರರಿಗೆ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಗಳಲ್ಲಿ ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ತರಬೇತಿಯನ್ನು ಏಳು ತಿಂಗಳ ಕಾಲ ಕರ್ನಾಟಕ ಮಾಧ್ಯಮ ಅಕಾಡೆಮಿಯ ಮೂಲಕ ಏರ್ಪಡಿಸಲು ಆಯೋಜಿಸಲಾಗಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಒಬ್ಬ ಮತ್ತು ಪರಿಶಿಷ್ಟ ಪಂಗಡದ ಒಬ್ಬ ಒಟ್ಟು ಇಬ್ಬರು ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳಿಗೆ ಅವಕಾಶವಿದೆ. ಅರ್ಜಿಯನ್ನು ಜನವರಿ, 29 ರ ಸಂಜೆ 5 ಗಂಟೆಯೊಳಗೆ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ ಇಲ್ಲ್ಲಿಗೆ ಸಲ್ಲಿಸಬೇಕು. ಅಭ್ಯರ್ಥಿಯು ಕರ್ನಾಟಕ ರಾಜ್ಯದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮ, ವಿದ್ಯುನ್ಮಾನ ಮಾದ್ಯಮದಲ್ಲಿ ಸ್ನಾತಕೋತ್ತರ, ಪದವಿ ಪಡೆದಿರಬೇಕು. ಹೆಚ್ಚಿನ ಮಾಹಿತಿಗೆ ಕಚೇರಿ ಸಮಯದಲ್ಲಿ 08272-228449 ನ್ನು ಸಂಪರ್ಕಿಸಬಹುದಾಗಿದೆ.