ಸುಂಟಿಕೊಪ್ಪ, ಜ. 22; ಸುಂಟಿಕೊಪ್ಪ ಕ್ಲಸ್ಟರ್ ಹಾಗೂ ಸರ್ಕಾರಿ ಪ್ರೌಢಶಾಲೆಯ ಸಮಾಜ ಸಂಘದ ವತಿಯಿಂದ ರಾಷ್ಟ್ರೀಯ ಯುವ ದಿನ ಮತ್ತು ವಿವೇಕಾನಂದ ಜಯಂತಿಯನ್ನು ಆಚರಿಸಲಾಯಿತು.

ಸ್ವಾಮಿ ವಿವೇಕಾನಂದರ ‘ಆದರ್ಶ ವ್ಯಕ್ತಿತ್ವ ಮತ್ತು ವಿಚಾರಧಾರೆಗಳು’ಕುರಿತು ಮಾತನಾಡಿದ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿ.ಟಿ.ಸೋಮಶೇಖರ್ ಅವರು, ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ತತ್ವ ಆದರ್ಶಗಳನ್ನು ಮೈ ಗೂಡಿಸಿಕೊಂಡು ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದರು.

ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಸ್ವಾಮಿ ವಿವೇಕಾನಂದರ ಸಂದೇಶಗಳನ್ನು ತಿಳಿಸಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಬೋಧಿಸಿದರು.

ಕ್ಲಸ್ಟರ್ ಸಂಪನ್ಮೂಲ ಕೇಂದ್ರದ ವತಿಯಿಂದ ನಡೆದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಕೊಡಗರಹಳ್ಳಿ ಸುಂಟಿಕೊಪ್ಪ ನಾಡು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಇಂದಿರಾ, ಎಸ್ ಡಿಎಂಸಿ ಅಧ್ಯಕ್ಷ ಚಂದ್ರ, ಶೇಖರ್,ಸಿಆರ್ ಪಿ ಪುರುಷೋತ್ತಮ್,ಮುಖ್ಯಶಿಕ್ಷಕಿ ಸಿ.ಎ.ಗೀತಾ,ಸಂಪನ್ಮೂಲ ವ್ಯಕ್ತಿ ಎಸ್.ಕೆ.ಸೌಭಾಗ್ಯ ಇತರರು ಇದ್ದರು.