ಸೋಮವಾರಪೇಟೆ, ಜ. 24: ಮಾಧ್ಯಮಗಳಿಂದ ಸಾಮಾಜಿಕ ಜಾಗೃತಿ ಸಾಧ್ಯ. ಈ ನಿಟ್ಟಿನಲ್ಲಿ ಪತ್ರಿಕೆ ಗಳು ಮತ್ತು ದೃಶ್ಯ ಮಾಧ್ಯಮಗಳು ಪರಿಣಾಮಕಾರಿ ಯಾಗಿ ಕೆಲಸ ನಿರ್ವಹಿಸಬೇಕಿದೆ ಎಂದು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ ಅಭಿಪ್ರಾಯಿಸಿದರು.

ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಒಕ್ಕಲಿಗರ ಸಂಘ ಮತ್ತು ಸ್ಪಂದನ ಗ್ರಾಮೀಣ ಶಿಕ್ಷಣಾಭಿವೃದ್ಧಿ ಟ್ರಸ್ಟ್ ವತಿಯಿಂದ ಇಲ್ಲಿನ ವಿಶ್ವಮಾನವ ಕುವೆಂಪು ಬಿಟಿಸಿಜಿ ಪದವಿಪೂರ್ವ ಕಾಲೇಜಿ ನಲ್ಲಿ ಆಯೋಜಿಸಲಾಗಿದ್ದ ಪತ್ರಿಕೋದ್ಯಮದ ಅವಕಾಶಗಳು ಕುರಿತ ಕಾರ್ಯಾಗಾರ ದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ, ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕಾರ್ಯದಲ್ಲಿ ಮಾಧ್ಯಮಗಳ ಪಾತ್ರ ಅಪಾರವಾಗಿದ್ದು, ಪತ್ರಿಕೋದ್ಯಮದ ತ್ತಲೂ ವಿದ್ಯಾರ್ಥಿಗಳು ಆಸಕ್ತಿ ವಹಿಸ ಬೇಕೆಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಆರ್. ಹರೀಶ್‍ಕುಮಾರ್ ವಹಿಸಿದ್ದರು. ಸಂಘದ ಕಾರ್ಯದರ್ಶಿ ವಿಜಯ್ ಹಾನಗಲ್, ಸ್ಪಂದನ ಗ್ರಾಮೀಣ ಶಿಕ್ಷಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಹೆಚ್.ಆರ್. ಸುರೇಶ್, ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯ ಎಸ್.ಎ. ಮುರುಳೀಧರ್, ಕಾಲೇಜು ಪ್ರಾಂಶುಪಾಲ ಶರಣ್, ಸಂಪನ್ಮೂಲ ವ್ಯಕ್ತಿಗಳಾದ ಸ್ಕಂದ, ಗಣಪತಿ ಅವರುಗಳು ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಶಂಸನಾ ಪತ್ರ ವಿತರಿಸಲಾಯಿತು. ವರದಿ ತಯಾರಿಕೆ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪರ್ಧೆ ಆಯೋಜಿಸಿ ಉತ್ತಮ ವರದಿಗಾರಿಕೆಗೆ ಪ್ರಶಸ್ತಿ ನೀಡಲಾಯಿತು.