ಸೋಮವಾರಪೇಟೆ, ಜ. 23: ಇಲ್ಲಿನ ಕೆಂಚಮ್ಮನಬಾಣೆಯ ಭಾರತ್ ಮಾತಾ ಸೇವಾ ಸಂಘದ ವತಿಯಿಂದ 70ನೇ ಗಣರಾಜ್ಯೋತ್ಸವ ಅಂಗವಾಗಿ ರಾಜ್ಯ ಮಟ್ಟದ ಪುರುಷರ ಮುಕ್ತ ರಿಪಬ್ಲಿಕ್ ಕಪ್ ಕಬಡ್ಡಿ ಪಂದ್ಯಾವಳಿಯನ್ನು ತಾ. 26 ಮತ್ತು 27 ರಂದು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ಜೆ. ಸುನಿಲ್ ತಿಳಿಸಿದ್ದಾರೆ.
ಪತ್ರಿಕಾ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಂಚಮ್ಮನ ಬಾಣೆಯಲ್ಲಿ ತಾ. 26 ರಂದು ಬೆಳಿಗ್ಗೆ 9.30ಕ್ಕೆ ಪಂದ್ಯಾಟಕ್ಕೆ ಚಾಲನೆ ನೀಡಲಾಗುವದು. ಅಂದು ಗ್ರಾಮಸ್ಥರಿಗೆ ವಿವಿಧ ಕ್ರೀಡಾಸ್ಪರ್ಧೆಗಳು ನಡೆಯಲಿವೆ ಎಂದರು.
ತಾ. 27 ರಂದು ಕಬಡ್ಡಿ ಪಂದ್ಯಾಟಗಳು ನಡೆಯಲಿದ್ದು, ವಿಜೇತ ತಂಡಕ್ಕೆ 30ಸಾವಿರ ರೂ. ನಗದು ಮತ್ತು ಆಕರ್ಷಕ ಟ್ರೋಫಿಯನ್ನು ನೀಡಲಾಗುತ್ತದೆ. ಎರಡನೆ ಬಹುಮಾನ 20ಸಾವಿರ ರೂ., ಮೂರನೆ ಸ್ಥಾನಗಳಿಸುವ ತಂಡಕ್ಕೆ 10ಸಾವಿರ ರೂ. ಹಾಗೂ ಟ್ರೋಫಿಯನ್ನು ನೀಡಲಾಗುತ್ತದೆ. ಆಸಕ್ತ ತಂಡಗಳು ತಾ.25ರ ಸಂಜೆಯೊಳಗೆ ತಮ್ಮ ತಂಡಗಳ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ಸಂಖ್ಯೆ 9900275510, 8762414941 ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದರು.
ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕøತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. ಗೋಷ್ಠಿಯಲ್ಲಿ ಗೌರವಾಧ್ಯಕ್ಷ ಆನಂದ್, ಉಪಾಧ್ಯಕ್ಷ ವಿಜಯಕುಮಾರ್, ಕಾರ್ಯದರ್ಶಿ ಸುಮಂತ್, ಖಜಾಂಚಿ ಸುರೇಶ್ ಉಪಸ್ಥಿತರಿದ್ದರು.