ಮಡಿಕೇರಿ, ಜ. 24: ಜಿಲ್ಲಾಡಳಿತ ವತಿಯಿಂದ ತಾ. 26 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ದಿನಾಚರಣೆ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವÀ ಸಾ.ರಾ.ಮಹೇಶ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಎಸ್.ಎಲ್. ಭೋಜೇಗೌಡ, ಆಯನೂರು ಮಂಜುನಾಥ್ ಜಿ.ಪಂ.ಅಧ್ಯಕ್ಷ ಬಿ.ಎ. ಹರೀಶ್, ಸಂಸದ ಪ್ರತಾಪ್ ಸಿಂಹ, ಜಿ.ಪಂ.ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಇತರರು ಪಾಲ್ಗೊಳ್ಳಲಿದ್ದಾರೆ.
ಸಂಜೆ 4.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.