ಕುಶಾಲನಗರ, ಜ. 23: ಕರ್ನಾಟಕ ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಕೊಡಗು ಜಿಲ್ಲಾ ಘಟಕದ ವತಿಯಿಂದ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಕುಶಾಲನಗರ ಸರ್ಕಾರಿ ಆಸ್ಪತ್ರೆಯಲ್ಲಿ ಒಳ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಲಾಯಿತು.

ಈ ಸಂದರ್ಭ ಮಾತನಾಡಿದ ಕರ್ನಾಟಕ ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಕೆ.ಆರ್. ಜಗದೀಶ್, ಬೀದಿಬದಿ ವ್ಯಾಪಾರಿಗಳು ಇತ್ತೀಚೆಗೆ ಹಲವು ರೀತಿಯಲ್ಲಿ ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಪಟ್ಟಣ ವ್ಯಾಪ್ತಿಯಲ್ಲಿ ವ್ಯಾಪಾರ ನಡೆಸಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕಿದೆ ಎಂದರು.

ಈ ಸಂದರ್ಭ ಕರ್ನಾಟಕ ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಕೊಡಗು ಜಿಲ್ಲಾ ಉಸ್ತುವಾರಿ ಕೆ. ರವಿ, ಜಿಲ್ಲಾ ಉಪಾಧ್ಯಕ್ಷ ಕೆ.ಕೆ. ದಿನೇಶ್, ಕಾರ್ಯದರ್ಶಿ ಸತೀಶ್, ಖಜಾಂಚಿ ಸೋಮಣ್ಣ, ಕುಶಾಲನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ. ಅನಿಲ್, ಹೋಬಳಿ ಘಟಕದ ಅಧ್ಯಕ್ಷ ಫಯಾಜ್ ಭಾಷಾ, ಉಪಾಧ್ಯಕ್ಷ ಮಂಜು, ಕಾರ್ಯದರ್ಶಿ ಮುನೀರ್, ಸಹ ಕಾರ್ಯದರ್ಶಿ ಯೂಸುಫ್, ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆ.ಬಿ. ರಾಜು ಮತ್ತಿತರರು ಇದ್ದರು.