ವೀರಾಜಪೇಟೆ, ಜ. 23: ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವ ಸಲುವಾಗಿ ಸರಕಾರ ಅನೇಕ ಉತ್ತಮ ಯೋಜನೆಗಳನ್ನು ಜಾರಿಗೆ ತರುತ್ತಿದೆ. ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಚ್ಚಾಡೋ ಹೇಳಿದರು.

ಸಂತ ಅನ್ನಮ್ಮ ಶಾಲಾ ಆವರಣದಲ್ಲಿ ನಡೆದ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ತಪ್ಪದೆ ಶಾಲೆಗೆ ಬರಬೇಕು ವಿಶೇಷವಾಗಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಕಲಿಕೆಗೆ ಯಾವ ತೊಂದರೆ ಆಗಬಾರದೆಂಬ ದೃಷ್ಟಿಯಿಂದ ಸರಕಾರ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿ ಪ್ರೋತ್ಸಾಹ ನೀಡುತ್ತಿದೆ ಎಂದರು.

ವೇದಿಕೆಯಲ್ಲಿ ಅತಿಥಿಗಳಾಗಿ ಪಟ್ಟಣ ಪಂಚಾಯಿತಿ ಸದಸ್ಯೆ ಆಶಾ ಸುಬ್ಬಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬಿಳಗಿ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಮಾರ್ಗರೇಟ್ ಲಾರ್ಸದೊ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಜಾನೇಟ್, ಆಂಗ್ಲ ಮಾದ್ಯಮದ ಮುಖ್ಯ ಶಿಕ್ಷಕಿ ಅನ್ನಮೇರಿ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಂದ್ರ, ಅನುದಾನಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರೋಹಿತ್, ರಾಜ್ಯ ಶಿಕ್ಷಕರ ಸಂಘದ ನಿರ್ದೇಶಕ ಸುಬ್ರಮಣಿ ಉಪಸ್ಥಿತರಿದ್ದರು.

ಸಮಾರಂಭದ ಅಧ್ಯಕ್ಷತೆಯನ್ನು ಸಂತ ಅನ್ನಮ್ಮ ವಿದ್ಯಾ ಸಂಸ್ಥೆಗಳ ವ್ಯವಸ್ಥಾಪಕರು ಹಾಗೂ ಧರ್ಮಗುರುಗಳಾದ ಮದಲೈಮುತ್ತು ವಹಿಸಿ ಮಾತನಾಡಿದರು. 184 ಮಂದಿ ವಿದ್ಯಾರ್ಥಿಗಳಿಗೆ ಸೈಕಲ್‍ಗಳನ್ನು ವಿತರಿಸಲಾಯಿತು.