ಮಡಿಕೇರಿ, ಜ. 26: ಕಾಂಗ್ರೆಸ್- ಜೆಡಿಎಸ್ ಮಿತ್ರಪಕ್ಷಗಳ ಪರವಾಗಿ ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸಿ.ಹೆಚ್. ವಿಜಯಶಂಕರ್ ಆಯ್ಕೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಹುಣಸೂರಿನ ಕನಕ ಭವನದಲ್ಲಿ ನಡೆದ ಸಭೆಯೊಂದರಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಅಡಗೂರು ಹೆಚ್. ವಿಶ್ವನಾಥ್ ಪ್ರಕಟಿಸಿದರು. ಸಂಗೊಳ್ಳಿ ರಾಯಣ್ಣ ಸ್ಮರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.ಸಿ.ಹೆಚ್. ವಿಜಯಶಂಕರ್ ಅವರು ಈ ಹಿಂದೆ ಬಿಜೆಪಿಯಲ್ಲಿದ್ದು, ಮೈಸೂರು- ಕೊಡಗು ಲೋಕಸಭಾ ಸದಸ್ಯರಾಗಿ, ಹುಣಸೂರು ಕ್ಷೇತ್ರದ ಶಾಸಕರಾಗಿ, ಅರಣ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಬಳಿಕ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರಿದರು.ಈ ಕುರಿತು ವಿಜಯಶಂಕರ್ ಅವರ ಅಭಿಪ್ರಾಯ ಬಯಸಿದಾಗ ತಾನು ಅಭ್ಯರ್ಥಿಯಾಗಿ ಸ್ಪರ್ಧಿಸುವ ಆಕಾಂಕ್ಷಿಯಾಗಿರುವ ಬಗ್ಗೆ ಖಚಿತಪಡಿಸಿದರು. ವಿಶ್ವನಾಥ್ ಅವರು ಸಮಾರಂಭದಲ್ಲಿ ಈ ಕುರಿತು ಪ್ರಕಟಿಸಿದ್ದಾರೆ. ಇನ್ನುಳಿದಂತೆ ಕಾಂಗ್ರೆಸ್ - ಜೆಡಿಎಸ್ ಪಕ್ಷಗಳ ಪ್ರಮುಖರು ಈ ಕುರಿತು
ಅಂತಿಮ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.