ಸೋಮವಾರಪೇಟೆ, ಜ.26: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ 70ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ತಾಲೂಕು ತಹಶೀಲ್ದಾರ್ ಪಿ.ಎಸ್. ಮಹೇಶ್ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ಮಕ್ಕಳಿಗೆ ಶಿಕ್ಷಣದ ಹಕ್ಕು ಕಾಯ್ದೆ ಜಾರಿಯಲ್ಲಿದ್ದು, ಪ್ರತಿಯೋರ್ವರೂ ವಿದ್ಯಾಭ್ಯಾಸದೊಂದಿಗೆ ದೇಶ ಪ್ರೇಮವನ್ನು ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.ತಾಲೂಕು ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ರಾಜೇಶ್ ಮಾತನಾಡಿ, ಸದೃಢ ರಾಷ್ಟ್ರ ನಿರ್ಮಾಣಕ್ಕೆ ವಿದ್ಯಾರ್ಥಿ ಗಳೊಂದಿಗೆ ಸಾರ್ವಜನಿಕರೂ ಸಹ ಸಂಕಲ್ಪ ತೊಡಬೇಕು ಎಂದರು. ತಾ.ಪಂ. ಉಪಾಧ್ಯಕ್ಷ ಅಭಿಮನ್ಯುಕುಮಾರ್, ಜಿ.ಪಂ. ಸದಸ್ಯೆ ವಿದ್ಯಾಭ್ಯಾಸದೊಂದಿಗೆ ದೇಶ ಪ್ರೇಮವನ್ನು ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.ತಾಲೂಕು ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ರಾಜೇಶ್ ಮಾತನಾಡಿ, ಸದೃಢ ರಾಷ್ಟ್ರ ನಿರ್ಮಾಣಕ್ಕೆ ವಿದ್ಯಾರ್ಥಿ ಗಳೊಂದಿಗೆ ಸಾರ್ವಜನಿಕರೂ ಸಹ ಸಂಕಲ್ಪ ತೊಡಬೇಕು ಎಂದರು. ತಾ.ಪಂ. ಉಪಾಧ್ಯಕ್ಷ ಅಭಿಮನ್ಯುಕುಮಾರ್, ಜಿ.ಪಂ. ಸದಸ್ಯೆ (ಮೊದಲ ಪುಟದಿಂದ) ತನ್ನ ಅಸಾಮಾನ್ಯ ಪ್ರತಿಭೆಯ ಮೂಲಕ ವಲ್ಡ್ ಬುಕ್ ಆಫ್ ರೆಕಾರ್ಡ್‍ನಲ್ಲಿ ಹೆಸರು ದಾಖಲಿಸಿರುವ ಇಲ್ಲಿನ ಆಶಾ ಮತ್ತು ಅಶ್ವಿನ್ ಅವರ ಪುತ್ರ ಆನ್ಷ್, ಮಾಜೀ ಸೈನಿಕ ಕುಂಞಪ್ಪ, ಜಿ.ಪಂ. ಇಂಜಿನಿಯರಿಂಗ್ ವಿಭಾಗದ ಅಭಿಯಂತರ ಜಯರಾಂ ಅವರುಗಳನ್ನು ಸನ್ಮಾನಿಸಲಾಯಿತು.

ಇಲ್ಲಿನ ಜೈಜವಾನ್ ಮಾಜೀ ಸೈನಿಕರ ಸಂಘದ ಅಧ್ಯಕ್ಷ ಈರಪ್ಪ ಅವರ ನೇತೃತ್ವದಲ್ಲಿ ಸದಸ್ಯರುಗಳು ಸಮವಸ್ತ್ರದೊಂದಿಗೆ ಶಿಸ್ತು ಬದ್ಧವಾಗಿ ಪೆರೇಡ್‍ನಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದರು.

ದೇಶಪ್ರೇಮದ ನೃತ್ಯರೂಪಕ :ಗಣರಾಜ್ಯೋತ್ಸವ ಅಂಗವಾಗಿ ಸೋಮವಾರಪೇಟೆಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ

ಮೂಡಿಬಂದ ನೃತ್ಯ ರೂಪಕಗಳು ನೆರೆದಿದ್ದವರಲ್ಲಿ ದೇಶಪ್ರೇಮದ ಕಿಚ್ಚು ಹತ್ತಿಸಿತು.

ಸೈನಿಕರನ್ನು ಪ್ರಧಾನವಾಗಿರಿಸಿಕೊಂಡು ರಚಿಸಲಾಗಿರುವ ದೇಶಭಕ್ತಿ ಗೀತೆಗಳಿಗೆ ನೃತ್ಯ ಮಾಡಿದ ವಿದ್ಯಾರ್ಥಿಗಳು, ನಡುವೆ ಸೈನಿಕರ ತ್ಯಾಗಗಳನ್ನು ಪರಿಚಯಿಸುವ ಸಣ್ಣ ಸಣ್ಣ ರೂಪಕವನ್ನು ಪ್ರಸ್ತುತಪಡಿಸಿದರು. ಜೈ ಹೋ ಗೀತೆಗೆ ಹೆಜ್ಜೆ ಹಾಕಿದರು.

ಪ್ರಾಥಮಿಕ ಶಾಲಾ ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ ಓಎಲ್‍ವಿ ಶಾಲೆ ಪ್ರಥಮ, ಸಾಂದೀಪನಿ ಶಾಲೆ ದ್ವಿತೀಯ, ಜ್ಞಾನವಿಕಾಸ ಶಾಲೆ ತೃತೀಯ ಸ್ಥಾನ ಪಡೆದರೆ, ಜಿ.ಎಂ.ಪಿ. ಶಾಲೆ ಸಮಾಧಾನಕರ ಬಹುಮಾನಕ್ಕೆ ಭಾಜನವಾಯಿತು.

ಮಸಗೋಡು ಚನ್ನಮ್ಮ ಶಾಲೆ, ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆ, ಸಂತ ಜೋಸೆಫರ ಶಾಲೆ, ಎಸ್‍ಜೆಎಂ, ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಬಹುಮಾನಕ್ಕೆ ಗೊಂದಲ: ಪ್ರಾಥಮಿಕ ಮತ್ತು ಪ್ರೌಢಶಾಲೆ ವಿಭಾಗದಲ್ಲಿ ಸ್ಪರ್ಧೆ ಆಯೋಜಿಸಲಾಗಿದ್ದರೂ ಸಹ ಕೆಲವೊಂದು ಪ್ರೌಢಶಾಲೆಗಳು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳನ್ನು ಸೇರಿಸಿಕೊಂಡಿದ್ದಾರೆ ಎಂಬ ಬಗ್ಗೆ ಗೊಂದಲ ಏರ್ಪಟ್ಟಿದ್ದರಿಂದ, ಪ್ರೌಢಶಾಲಾ ವಿಭಾಗದಲ್ಲಿ ಭಾಗವಹಿಸಿದ್ದ ಎಲ್ಲಾ ಶಾಲೆಗಳಿಗೂ ಪ್ರೋತ್ಸಾಹಕ ಬಹುಮಾನ ನೀಡಲಾಯಿತು.