*ಸಿದ್ದಾಪುರ, ಜ. 25: ವಾಲ್ನೂರು-ತ್ಯಾಗತ್ತೂರು ಗ್ರಾಮ ಪಂಚಾಯಿತಿ ಆಡಳಿತದ ವತಿಯಿಂದ ವಿಶೇಷಚೇತನ ಮಕ್ಕಳಿಗೆ ಉಚಿತವಾಗಿ ವ್ಹೀಲ್ ಚೇರ್ ವಿತರಿಸಲಾಯಿತು.

ಜ್ಯೋತಿ ನಗರದ ಮೊಹಮದ್ ಆಲಿ, ಅಭಿಲಾಶ್ ಮತ್ತು ರಕ್ಷಿತ ವ್ಹೀಲ್ ಚೇರ್ ಪಡೆದುಕೊಂಡರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗರತ್ನ, ಪಂಚಾಯಿತಿ ಸದಸ್ಯ ಅಂಚೆಮನೆ ಸುಧಿ, ಗ್ರಾಮಾಭಿವೃದ್ಧಿ ಅಧಿಕಾರಿ ಅನಿಲ್ ಉಪಸ್ಥಿತರಿದ್ದರು.