ಮಡಿಕೇರಿ, ಜ.25: ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ತಾ. 26ರಂದು (ಇಂದು) ಬೆಳಿಗ್ಗೆ 8 ಗಂಟೆಗೆ ಕೋಟೆ ಆವರಣದಲ್ಲಿರುವ ಪರಿಷತ್ತು ಕಚೇರಿಯಲ್ಲಿ ಧ್ವಜಾರೋಹಣ ನೆರವೇರಲಿದೆ. ಕಸಾಪ ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಕಸಾಪ ಗೌರವ ಕಾರ್ಯದರ್ಶಿ ಕೆ.ಎಸ್.ರಮೇಶ್ ತಿಳಿಸಿದ್ದಾರೆ.