*ಗೋಣಿಕೊಪ್ಪಲು, ಜ. 25 : ನಗರ ಕಾಂಗ್ರೆಸ್ ಅಧ್ಯಕ್ಷರಾಗಿ ಕುಲ್ಲಚಂಡ ಪ್ರಮೋದ್ ಗಣಪತಿ ಆಯ್ಕೆ ಮಾಡಲಾಗಿದೆ.
ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಗೋಣಿಕೊಪ್ಪ ಕಚೇರಿಯಲ್ಲಿ ನಡೆದ ಆಯ್ಕೆ ಸಭೆಯಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ ಅಧ್ಯಕ್ಷತೆಯಲ್ಲಿ ಗಣಪತಿ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.
ಈ ಹಿಂದೆ ನಗರ ಕಾಂಗ್ರೆಸ್ ಅಧ್ಯಕ್ಷರಾಗಿ ಮಳವಂಡ ಅರವಿಂದ್ ಕುಟ್ಟಪ್ಪ ಕಾರ್ಯನಿರ್ವಹಿಸಿದರು. ಆಯ್ಕೆ ಸಂದರ್ಭ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎನ್. ಪ್ರಕಾಶ್,ಹಿರಿಯ ಮುಖಂಡ ಕೊಳ್ಳಿಮಾಡ ಅಜಿತ್ ಅಯ್ಯಪ್ಪ, ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಜೆ.ಕೆ.ಸೋಮಣ್ಣ, ಜಿಲ್ಲಾ ಉಪಾಧ್ಯಕ್ಷ ಮುರುಗ, ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಕರ್ತಂಡ ಸೋಮಣ್ಣ, ಉಪಾಧ್ಯಕ್ಷ ಅಂಕಿತ್ ಪೊನ್ನಪ್ಪ, ಗ್ರಾ.ಪಂ ಸದಸ್ಯ ಕಲೀಂವುಲ್ಲ, ಮಂಜುಳ, ಯಸ್ಮಿನ್, ಬ್ಲಾಕ್ ಕಾಂಗ್ರೆಸ್ ಸದಸ್ಯ ಚೇತನ್, ಎ.ಜೆ. ಬಾಬು, ಬಿ.ಸಿ.ಎಂ.ಬಿ, ಅಧ್ಯಕ್ಷ ಮಣಿ ಹಲವರು ಉಪಸ್ಥಿತರಿದ್ದರು.