ಕೂಡಿಗೆ, ಜ. 25: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದೊಂದಿಗೆ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಕೂಡಿಗೆಯ ಡಯಟ್ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿ ಹೆಚ್.ಕೆ. ಪಾಂಡು ಅವರು ಉದ್ಘಾಟಿಸಿದರು. ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ರವಿ ಮಾತನಾಡಿ, ದೈನಂದಿನ ಚಟುವಟಿಕೆಗಳ ಜೊತೆಗೆ ಇಂತಹ ಕ್ರೀಡಾ ಮತ್ತು ಸಾಂಸ್ಕೃತಿಕ ಮನೋಭಾವವನ್ನು ಹೊಂದು ವದರಿಂದ ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಸಹಕಾರಿಯಾಗುತ್ತದೆ. ಕ್ರೀಡೆಯ ಬಗ್ಗೆ ಹೆಚ್ಚು ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದರು.

ಕೂಡಿಗೆ ಡಯಟ್‍ನ ಹಿರಿಯ ಉಪನ್ಯಾಸಕ ಮಹದೇವ ಮಾತ ನಾಡಿದರು. ಧ್ವಜಾರೋಹಣವನ್ನು ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಯ್ಯ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಸೋಮವಾರಪೇಟೆ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರಸನ್ನ ಕುಮಾರ್, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಎನ್ ಮಂಜುನಾಥ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಲಯ ಅಧ್ಯಕ್ಷ ಸಿ.ಕೆ. ಶಿವಕುಮಾರ್ ಸೇರಿದಂತೆ ಜಿಲ್ಲೆಯ, ತಾಲೂಕಿನ ಶಿಕ್ಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.