ಮಡಿಕೇರಿ, ಜ. 26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸಂಸತ್ ಸದಸ್ಯರ ಪ್ರದೇಶಾಭಿವೃದ್ಧಿ ಅನುದಾನದಡಿ 22 ಮಂದಿ ವಿಕಲಚೇತನರಿಗೆ ಯಂತ್ರಚಾಲಿತ ತ್ರಿಚಕ್ರ ವಾಹನವನ್ನು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಇತರರು ತ್ರಿಚಕ್ರ ವಾಹನದ ಕೀ ನೀಡುವ ಮೂಲಕ ವಿತರಣೆ ಮಾಡಿದರು.

ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ. ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಬಿ.ಪಿ. ದೇವರಾಜು ಇತರರು ಇದ್ದರು.

ಲೋಕಸಭಾ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ವಿಕಲಚೇತನರಿಗೆ ಅನುಕೂಲವಾಗಲು ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರೂ. 14.76 ಲಕ್ಷ ವೆಚ್ಚದಲ್ಲಿ 22 ಮಂದಿಗೆ ಮೋಟಾರು ಚಾಲಿತ ತ್ರಿಚಕ್ರ ವಾಹನ ವಿತರಿಸಲಾಯಿತು.