ಮಡಿಕೇರಿ, ಜ. 25: ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸಿ.ಕೆ. ಬಾಲಕೃಷ್ಣ ಹಾಗೂ ಉಪಾಧ್ಯಕ್ಷರಾಗಿ ಬಿ.ಎಂ. ರಾಜೇಶ್ ಆಯ್ಕೆಯಾಗಿದ್ದಾರೆ. ಈಚೆಗೆ ನಡೆದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 8 ಮಂದಿ ಹಾಗೂ ಕಾಂಗ್ರೆಸ್ - ದಳ ಮೈತ್ರಿ ಕೂಟದ ಐವರು ಆಯ್ಕೆಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು. ಇದೀಗ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮರಳಿ ಅಧಿಕಾರ ಹಿಡಿಯುವದರೊಂದಿಗೆ, ನೂತನ ಅಧ್ಯಕ್ಷ - ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಇಂದು ನಡೆಯಿತು.