ಶನಿವಾರಸಂತೆ, ಜ. 26: ಶನಿವಾರಸಂತೆ ನಗರದಲ್ಲಿ ಗುರುವಾರ ಸಂಜೆ ಸೋಮವಾರಪೇಟೆ ವೃತ್ತ ನಿರೀಕ್ಷಕ ನಂಜುಂಡೇಗೌಡ ಹಾಗೂ ಠಾಣಾಧಿಕಾರಿ ಹೆಚ್.ಎಂ. ಮರಿಸ್ವಾಮಿ ಮತ್ತು ಸಿಬ್ಬಂದಿಗಳು ನಗರದಲ್ಲಿ ಸಂಚರಿಸುವ ವಾಹನಗಳ ದಾಖಲೆ ಪತ್ರಗಳನ್ನು ಪರಿಶೀಲಿಸಿ, ದಾಖಲೆ ಪತ್ರಗಳನ್ನು ಹೊಂದಿಲ್ಲದ ವಾಹನಗಳ ಮಾಲೀಕರಿಗೆ ದಂಡ ವಿಧಿಸಿದರು.
ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ ಬಗ್ಗೆ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿದೆ.
ಮದ್ಯಪಾನ ಮಾಡಿ ಬೈಕ್ ಚಾಲನೆ ಮಾಡುತ್ತಿದ್ದ ನಾಲ್ವರು ಆರೋಪಿಗಳಿಗೆ ನ್ಯಾಯಾಲಯ ಒಟ್ಟು ರೂ. 9,500 ದಂಡ ವಿಧಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ವೃತ್ತ ನಿರೀಕ್ಷಕ ನಂಜುಂಡೇಗೌಡ, ಠಾಣಾಧಿಕಾರಿ ಎಚ್.ಎಂ. ಮರಿಸ್ವಾಮಿ, ಸಿಬ್ಬಂದಿಗಳಾದ ಸ್ವಾಮಿ, ಕುಮಾರಸ್ವಾಮಿ, ಪ್ರದೀಪ್ ಕುಮಾರ್, ಹರೀಶ್, ಈರಪ್ಪ, ವಿವೇಕ್, ಶಫೀಕ್ ಪಾಲ್ಗೊಂಡಿದ್ದರು.