ಮಡಿಕೇರಿ, ಜ. 25: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಇದೇ ಪ್ರಥಮ ಬಾರಿಗೆ ಹಮ್ಮಿಕೊಳ್ಳಲಾಗಿರುವ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಚಿಸಲಾಗಿರುವ ಲಾಂಛನವನ್ನು ಬಿಡುಗಡೆಗೊಳಿಸಲಾಯಿತು.
ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಅಧೀಕ್ಷಕಿ ಸುಮನ್ ಡಿ.ಪಣ್ಣೇಕರ್ ಬಿಡುಗಡೆಗೊಳಿಸಿದರು. ಸಾಹಿತ್ಯ ಪರಿಷತ್ತು ಹೊಸ ರೀತಿಯ ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೆ, ಪರಿಷತ್ ಸಹಕಾರದೊಂದಿಗೆ ಪೊಲೀಸರಿಗೂ ಕಾರ್ಯಕ್ರಮ ಹಮ್ಮಿಕೊಂಡಲ್ಲಿ ಸಹಕರಿಸುವದಾಗಿ ಹೇಳಿದರು.
ಈ ಸಂದರ್ಭದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್, ಮಡಿಕೇರಿ ತಾಲೂಕು ಅಧ್ಯಕ್ಷ ಕುಡೆಕಲ್ ಸಂತೋಷ್, ಜಿಲ್ಲಾ ನಿರ್ದೇಶಕಿ ತಳೂರು ಉಷಾರಾಣಿ, ಶ್ವೇತಾ ಇದ್ದರು.