*ಸಿದ್ದಾಪುರ, ಜ. 25: ಅಭ್ಯತ್‍ಮಂಗಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನ ಅಭಿವೃದ್ಧಿಗೆ ಜಿಲ್ಲಾ ಪಂಚಾಯತ್ ಸದಸ್ಯೆ ಸುನಿತಾ ಮಂಜುನಾಥ್ ತಮ್ಮ ಅನುದಾನದಿಂದ 3 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಿ ಕಾಮಗಾರಿಗೆ ಚಾಲನೆ ನೀಡಿದರು. ವಾಲ್ನೂರು–ತ್ಯಾಗತ್ತೂರು ಗ್ರಾಮ ಪಂಚಾಯತ್ ಸದಸ್ಯ ಅಂಚೆಮನೆ ಸುಧಿ ಈ ವೇಳೆ ಹಾಜರಿದ್ದರು.