ಗೋಣಿಕೊಪ್ಪ ವರದಿ, ಜ. 25: ಇಲ್ಲಿನ ಕಾವೇರಿ ಕಾಲೇಜು ವತಿಯಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿ ಆಚರಿಸಲಾಯಿತು. ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ನೀಡಿದರು.

ಪ್ರಾಂಶುಪಾಲೆ ಎಸ್.ಆರ್. ಉಷಾಲತಾ ನೇತಾಜಿ ಮಾತನಾಡಿ, ಭಾರತ ಕಂಡ ಅಪ್ರತಿಮ ದೇಶಭಕ್ತ ವೀರ ಸೇನಾನಿ, ನಮ್ಮ ರಾಷ್ಟ್ರದ ಮಹಾನ್ ನಾಯಕ ಸುಭಾಷ್ ಚಂದ್ರ ಬೋಸ್ ಅವರ ಜೀವನವು ಯುವಜನತೆಗೆ ಸ್ಪೂರ್ತಿಯಾಗಿದೆ. ಇವರ ಜೀವನ ಚರಿತ್ರೆಯನ್ನು ಓದುವ ಮೂಲಕ ದೇಶ ಭಕ್ತಿಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭ ಉಪ ಪ್ರಾಂಶುಪಾಲ ಪ್ರೊ. ಎ.ಎಂ. ಕಮಲಾಕ್ಷಿ, ಅಧ್ಯಾಪಕಿ ಪ್ರೊ. ಕೆ.ಎಸ್. ತುಳಸಿ, ಕಾಲೇಜು ಅಧೀಕ್ಷಕಿ ಹೆಚ್.ಕೆ. ಸೀತಾಲಕ್ಷ್ಮಿ ಪಾಲ್ಗೊಂಡಿದ್ದರು.