ಕೂಡಿಗೆ, ಜ. 26: ದೊಡ್ಡ ಅಳುವಾರದ ವನ್ಯಜೀವಿ ಪಶು ವೈದ್ಯಕೀಯ ಸಂಶೋದನಾ ಕೇಂದ್ರ ಮತ್ತು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಮಾನವ-ಕಾಡು ಪ್ರಾಣಿ (ಆನೆ) ನಿರ್ವಹಣೆ ಕುರಿತು ಕಾರ್ಯಕ್ರಮ ನಡೆಯಿತು.
ಉದ್ಘಾಟನೆಯನ್ನು ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯರಾದ ಹೆಚ್.ಎಸ್. ರವಿ ನೆರವೇರಿಸಿದರು. ಡಾ. ಚಿಟ್ಟಿಯಪ್ಪ ಮಾನವ-ಕಾಡು ಪ್ರಾಣಿ (ಆನೆ) ಸಂಘರ್ಷ ನಿರ್ವಹಣೆ ಕುರಿತು ಮಾತನಾಡಿದರು. ಈ ಸಂದರ್ಭ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ 75 ರೈತರಿಗೆ ತರಬೇತಿ ಪ್ರಮಾಣ ಪತ್ರ ನೀಡಲಾಯಿತು. ಅಳುವಾರದ ಪಶು ವೈದ್ಯಕೀಯ ಸಂಸ್ಥೆಯ ನಿರ್ದೇಶಕ ಡಾ. ಶಿವಕುಮಾರಿ ಹಾಗೂ ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದ ಡಾ. ಸುರೇಶ್, ವಲಯ ಅರಣ್ಯ ಅಧಿಕಾರಿ ಲಕ್ಷ್ಮಿಕಾಂತ್ ಸೇರಿದಂತೆ ಅಳುವಾರದ ಪಶು ವ್ಯೆದ್ಯಕೀಯ ಸಂಸ್ಥೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ, ಹುದುಗೂರು, ಮದಲಾಪುರ, ಕಾಳಿದೇವನಹೊಸೂರು, ಮಾವಿನಹಳ್ಳ ಗ್ರಾಮಸ್ಥರು ಭಾಗವಹಿಸಿದ್ದರು.