ಸೋಮವಾರಪೇಟೆ, ಜ. 27: ಇಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗಣರಾಜ್ಯೋತ್ಸವ ಅಂಗವಾಗಿ ತಾ. 28 ರಂದು (ಇಂದು) ತಾಲೂಕಿನ ಶಾಲಾ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಮತ್ತು ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಇಲ್ಲಿನ ಸ್ತ್ರೀ ಶಕ್ತಿ ಭವನದಲ್ಲಿ ತಾ. 28ರಂದು ಪೂರ್ವಾಹ್ನ 10 ಗಂಟೆಯಿಂದ ಸ್ಪರ್ಧೆ ನಡೆಯಲಿದ್ದು, 5 ರಿಂದ 9, 9 ರಿಂದ 12, 13 ರಿಂದ 16 ವರ್ಷ ವಯೋಮಾನದ ವಿಭಾಗದಲ್ಲಿ ದೇಶಭಕ್ತಿ ಗೀತೆ ಗಾಯನ, 10ರಿಂದ 12 ಮತ್ತು 13ರಿಂದ 16 ವರ್ಷ ವಯೋಮಾನದ ವಿಭಾಗದಲ್ಲಿ ಪ್ರಬಂಧ ಸ್ಪರ್ಧೆ ನಡೆಯಲಿದೆ ಎಂದು ಇಲಾಖಾ ಪ್ರಕಟಣೆ ತಿಳಿಸಿದೆ.