ಕುಶಾಲನಗರ, ಜ. 27: ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಕಾವೇರಿ ನದಿಗೆ ನೇರವಾಗಿ ಕಲುಷಿತ ತ್ಯಾಜ್ಯಗಳನ್ನು ಹರಿಸುತ್ತಿರುವ ಕ್ರಮವನ್ನು ಕಾವೇರಿ ನದಿ ಸ್ವಚ್ಛತಾ ಆಂದೋಲನ ಪ್ರಮುಖರು ಖಂಡಿಸಿದ್ದಾರೆ. ಈ ಸಂಬಂಧ ಸಮಿತಿಯಿಂದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಪತ್ರ ಬರೆದಿದ್ದು, ನದಿ ಸಂರಕ್ಷಣೆ ಹಿನ್ನೆಲೆ ಕೂಡಲೇ ಇಂಗುಗುಂಡಿ ನಿರ್ಮಾಣ ಮಾಡುವ ಮೂಲಕ ನೇರವಾಗಿ ಕಲುಷಿತ ನೀರು ಸೇರುವದನ್ನು ತಡೆಗಟ್ಟುವಂತೆ ಆಗ್ರಹಿಸಿದ್ದಾರೆ. ತಕ್ಷಣ ಕಾರ್ಯಯೋಜನೆ ರೂಪಿಸದಿದ್ದಲ್ಲಿ ಪಂಚಾಯಿತಿ ವಿರುದ್ಧ ಪ್ರತಿಭಟನೆ ನಡೆಸುವದಾಗಿ ಎಚ್ಚರಿಸಿದ್ದಾರೆ.