ನಾಪೆÇೀಕ್ಲು, ಜ. 27: ನಾಪೆÇೀಕ್ಲು ಲಯನ್ಸ್ ಕ್ಲಬ್ ವತಿಯಿಂದ ಸ್ಥಳೀಯ ಪದವಿ ಕಾಲೇಜಿನಲ್ಲಿ ತಾ. 30 ರಂದು ಮಾದಕ ದ್ರವ್ಯ ಮತ್ತು ಸಂಚಾರಿ ನಿಯಮ ಉಲ್ಲಂಘನೆ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸ ಲಾಗಿದೆ.
ಮಾದಕ ದ್ರವ್ಯಗಳ ಬಗ್ಗೆ ಮಡಿಕೇರಿ ವೈದ್ಯಕೀಯ ಕಾಲೇಜಿನ ಮನಶಾಸ್ತ್ರಜ್ಞ ಡಾ|| ರೂಪೇಶ್, ಸಂಚಾರಿ ನಿಯಮ ಉಲ್ಲಂಘನೆ ಬಗ್ಗೆ ನಾಪೆÇೀಕ್ಲು ಪೆÇಲೀಸ್ ಠಾಣಾಧಿಕಾರಿ ನಂಜುಂಡ ಸ್ವಾಮಿ ಹಾಗೂ ವಾಹನ ವಿಮೆಯ ಬಗ್ಗೆ ರಾಷ್ಟ್ರೀಯ ವಿಮೆಯ ಸಲಹೆಗಾರರಾದ ಗೋಣಿಕೊಪ್ಪ ಲಯನ್ಸ್ ಕ್ಲಬ್‍ನ ಎಂ.ಎಂ.ಗಣಪತಿ ಮಾಹಿತಿ ನೀಡಲಿದ್ದಾರೆ ಎಂದು ನಾಪೆÇೀಕ್ಲು ಲಯನ್ಸ್ ಕ್ಲಬ್ ಅಧ್ಯಕ್ಷ ಮುಕ್ಕಾಟಿರ ವಿನಯ್ ‘ಶಕ್ತಿ’ಗೆ ತಿಳಿಸಿದ್ದಾರೆ. ಈ ಕಾರ್ಯಾಗಾರದಲ್ಲಿ ನಾಪೆÇೀಕ್ಲು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ಕೋರಿದ್ದಾರೆ.