ನಾಪೋಕ್ಲು, ಜ. 27: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಭಾಗಮಂಡಲ ವಲಯ ವತಿಯಿಂದ ಇಲ್ಲಿನ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲೆ ಬಿ.ಎಂ. ಶಾರದಾ ವಹಿಸಿದ್ದರು. ರಾಫೆಲ್ಸ್ ಇಂಟರ್ನ್ಯಾಷನಲ್ ಪದವಿಪೂರ್ವ ಕಾಲೇಜಿನ ಹರಿಹರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ದುಶ್ಚಟ ಮುಕ್ತ ಸಮಾಜ ನಿರ್ಮಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯವಾದುದು ಎಂದರು. ಮುಖ್ಯ ಅತಿಥಿಯಾಗಿ ಮುತ್ತುರಾಣಿ, ಸೇವಾಪ್ರತಿನಿಧಿ ಬಾಳೆಯಡ ದಿವ್ಯ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ವೃಂದ ವಿದ್ಯಾರ್ಥಿಗಳು ಗ್ರಾಮ ಪಂಚಾಯಿತಿ ಸದಸ್ಯರು ಪಾಲ್ಗೊಂಡಿದ್ದರು. ವಲಯ ಮೇಲ್ವಿಚಾರಕ ಚೇತನ್ ಕೆ. ಪ್ರಾಸ್ತಾವಿಕ ನುಡಿಗಳನ್ನಾಡಿ ಕಾರ್ಯಕ್ರಮ ನಿರೂಪಿಸಿದರು.