ಮಡಿಕೇರಿ, ಜ. 27: ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಡಿಕೇರಿ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಸಿದ್ಧಗಂಗ ಮಠದ ಶ್ರೀ ಶಿವಕುಮಾರ್ ಮಹಾ ಸ್ವಾಮೀಜಿ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾಲೇಜಿನ ಪ್ರಾಂಶುಪಾಲೆ ಪ್ರೊ. ಚಿತ್ರಾ ವೈ ಅವರು ಅವರ ದಿವ್ಯ ಸಂದೇಶಗಳನ್ನು ಪಾಲಿಸುವಂತೆ ಹೇಳಿದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ.ದಯಾನಂದ ಕೆ.ಸಿ., ಸ್ವಾಮೀಜಿಯವರ ದಿವ್ಯ ಆದರ್ಶಗಳನ್ನು ಎಲ್ಲರೂ ಜೀವನದಲ್ಲಿ ಮೈಗೂಡಿಸಿಕೊಂಡು ಬಾಳುವಂತೆ ಹೇಳಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.