ಮಡಿಕೇರಿ, ಜ. 27: ನೆಹರು ಯುವ ಕೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ತರಬೇತಿ ಕೇಂದ್ರ, ಜಿಲ್ಲಾ ಯುವ ಒಕ್ಕೂಟ, ಸಂತೋಷ್ ಯುವಕ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ತಾ. 28 ರಿಂದ 30 ರವರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಯುವ ಮುಂದಾಳತ್ವ ಹಾಗೂ ಸಮುದಾಯ ಅಭಿವೃದ್ಧಿ ತರಬೇತಿ ಶಿಬಿರ ನಡೆಯಲಿದೆ.

ಉದ್ಘಾಟನಾ ಕಾರ್ಯಕ್ರಮ ತಾ. 28 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ನಗರಸಭೆ ಅಧ್ಯಕೆÀ್ಷ ಕಾವೇರಮ್ಮ ಸೋಮಣ್ಣ, ಸದಸ್ಯ ನಂದಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲ ಪಾಂಡು ವಿಜಯನ್, ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಜಸಿಂತಾ ಡಿಸೋಜ ಪಾಲ್ಗೊಳ್ಳಲಿದ್ದಾರೆ.

ತಾ. 30 ರಂದು ಮಧ್ಯಾಹ್ನ 12 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಜಿಲ್ಲಾಧಿಕಾರಿ ಕೆ.ಲಕ್ಷೀಪ್ರಿಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ., ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ಯೋಜನಾಧಿಕಾರಿ ಸದಾಶಿವ ಗೌಡ ಇತರರು ಪಾಲ್ಗೊಳ್ಳಲಿದ್ದಾರೆ.