ಸೋಮವಾರಪೇಟೆ, ಜ. 27: ಇಲ್ಲಿನ ಹಿರಿಯ ಮಾದರಿ ಪ್ರಾಥಮಿಕ ಶಾಲೆ ಹಾಗೂ ಹಳೆಯ ವಿದ್ಯಾರ್ಥಿಗಳ ಸಂಘದ ಸಭೆ ಅಧ್ಯಕ್ಷ ಬಿ.ಟಿ. ತಿಮ್ಮಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಶಾಲೆಯ ಸಹಕಾರದೊಂದಿಗೆ ತಾ. 31 ರಂದು ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಸುವಂತೆ ತೀರ್ಮಾನಿಸಲಾಯಿತು. ಕಾರ್ಯಕ್ರಮದ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಗೆ ಆಟೋಟ ಸ್ಪರ್ಧೆ, ಸಾಂಸ್ಕøತಿಕ ಸ್ಪರ್ಧೆ ನಡೆಸಲು ನಿರ್ಧರಿಸಲಾಯಿತು.

ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು, ಶಿಕ್ಷಕರು ಹಾಗೂ ಹಳೆಯ ವಿದ್ಯಾರ್ಥಿ ಸಂಘದ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸುವಂತೆ ತೀರ್ಮಾನಿಸಲಾಯಿತು. ಇದೇ ಸಂದರ್ಭ ಹಳೆಯ ವಿದ್ಯಾರ್ಥಿಗಳ ಸಂಘದ ಸದಸ್ಯತ್ವ ನೋಂದಣಿಗೆ ಅವಕಾಶ ನೀಡುವ ಮೂಲಕ ಸದಸ್ಯರ ಸಂಖ್ಯೆ ಹೆಚ್ಚಿಸುವಂತೆ ಖಜಾಂಚಿ ಸುರೇಶ್ ಹೇಳಿದರು.

ಸಭೆಯಲ್ಲಿ ಹಳೆಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಎಸ್.ಡಿ. ವಿಜೇತ, ಶಾಲಾ ಪದವೀಧರ ಮುಖ್ಯ ಶಿಕ್ಷಕಿ ಎಂ.ಜೆ. ಅಣ್ಣಮ್ಮ, ಪದಾಧಿಕಾರಿಗಳಾದ ನ.ಲ ವಿಜಯ, ಕಿಬ್ಬೆಟ್ಟ ಗಣೇಶ್, ದಾಮೋದರ್, ರುಬೀನ ಸೇರಿದಂತೆ ಇತರರು ಪಾಲ್ಗೊಂಡಿದ್ದರು.