ಸುಂಟಿಕೊಪ್ಪ, ಜ. 28: ಸುಂಟಿಕೊಪ್ಪ ಜೇಸಿಐ ಸಂಸ್ಥೆಯ 2019-2020ರ ಸಾಲಿನ ಅಧ್ಯಕ್ಷರಾಗಿ ನಿಡ್ಯಮಲೆ ಅಶೋಕ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹೊನ್ನಂಪಾಡಿ ಸುರೇಶ್ ಕುಶಾಲಪ್ಪ ನೇಮಕಗೊಂಡಿದ್ದಾರೆ.

ತಾ. 26 ರಂದು ಪದಗ್ರಹಣ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾಪಂಚಾಯಿತಿ ಸದಸ್ಯೆ ಕೆ.ಪಿ. ಚಂದ್ರಕಲಾ, ವಲಯ ಅಧ್ಯಕ್ಷ ಜೇಸಿ ಜಫಿನ್ ಜಾಯ್, ವಲಯ ಉಪಾಧ್ಯಕ್ಷ ಜೇಸಿ ಪ್ರವೀಣ್ ಕುಮಾರ್, ಭಾಗವಹಿಸಲಿದ್ದಾರೆ ಎಂದು ನಿರ್ಗಮಿತ ಅಧ್ಯಕ್ಷ ಅರುಣ್‍ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.