ಕೂಡಿಗೆ: ಕೂಡಿಗೆ ಸೈನಿಕ ಶಾಲೆಯಲ್ಲಿ 70ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು. ಜನರಲ್ ತಿಮ್ಮಯ್ಯ ಪೆರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಆರ್ಮಿ ಸರ್ವಿಸ್ ಸೆಲೆಕ್ಷನ್ ಬೋರ್ಡ್ ಸದಸ್ಯ ಬ್ರಿಗೇಡಿಯರ್ ಬಹದ್ದೂರ್ ಸಿಂಗ್ ಪಾಲ್ಗೊಂಡಿದ್ದರು.
ಶಾಲೆಯ ಅಶ್ವದಳದ ನಾಯಕ ಕೆಡೆಟ್ ನಾಗರಾಜ್ ಮತ್ತು ತಂಡದವರು ಮುಖ್ಯ ಅತಿಥಿಗಳನ್ನು ಪೆರೇಡ್ ಮೈದಾನಕ್ಕೆ ಕರೆತಂದರು. ಶಾಲೆಯ ಪ್ರಾಂಶುಪಾಲ ಗ್ರೂಪ್ ಕ್ಯಾಪ್ಟನ್ ಆರ್.ಆರ್. ಲಾಲ್ ಸ್ವಾಗತಿಸಿದರು. ಮುಖ್ಯ ಅತಿಥಿಗಳು ಧ್ವಜಾರೋಹಣ ನಡೆಸಿದರು.
ಈ ಸಂದರ್ಭ ಶಾಲೆಯ ವಿದ್ಯಾರ್ಥಿಗಳು ಪಥಸಂಚಲನದ ಮೂಲಕ ಗೌರವ ವಂದನೆ ಸಲ್ಲಿಸಿದರು. ಶಾಲೆಯಲ್ಲಿ ಏಳು ವರ್ಷಗಳ ಸತತ ಪರಿಶ್ರಮದ ಮೂಲಕ ಶಿಕ್ಷಣವನ್ನು ಪಡೆದು ಶಾಲೆಯಿಂದ ನಿರ್ಗಮಿಸುತ್ತಿರುವ ಹನ್ನೆರಡನೇ ತರಗತಿಯ ವಿದ್ಯಾರ್ಥಿಗಳು ಪಥಸಂಚಲನದ ಮೂಲಕ ತಮ್ಮ ಸೈನಿಕ ಶಾಲಾ ಜೀವನಕ್ಕೆ ವಿದಾಯ ಹೇಳುವ ಕಾಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಶಾಲೆಯ ಶೈಕ್ಷಣಿಕ ವಿಭಾಗದ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿಗೆ ಭಾಜನರಾಗಿದ್ದ ಕೆಡೆಟ್ ಗೊಯಾಂಕ್ ಪ್ರಿಯಂಶು ರೆಡ್ಡಿ ಮತ್ತು ಶಾಲೆಯ ಅತ್ಯುತ್ತಮ ಕ್ರೀಡಾಪಟು ಮತ್ತು ಆಲ್‍ರೌಂಡರ್ ಪ್ರಶಸ್ತಿಗೆ ಭಾಜನರಾಗಿದ್ದ ಕೆಡೆಟ್ ರಾಹುಲ್ ಕುಮಾರ್ ಅವರಿಗೆ ಮುಖ್ಯ ಅತಿಥಿಗಳು ಪ್ರಶಸ್ತಿ ಪತ್ರ ಮತ್ತು ಪಾರಿತೋಷಕವನ್ನು ಪ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಹನ್ನೆರಡನೇ ತರಗತಿಯ ವಿದ್ಯಾರ್ಥಿಗಳ ಪೋಷಕರು, ಉಪ ಪ್ರಾಂಶುಪಾಲ ಲೆಫ್ಟಿನೆಂಟ್ ಕರ್ನಲ್ ಸೀಮಾ ತ್ರಿಪಾಠಿ, ಆಡಳಿತಾಧಿಕಾರಿ ಮ್ಯಾಥ್ಯು, ಬೋಧಕ, ಬೋಧಕೇತರ ವರ್ಗದವರು ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ಕೆಡೆಟ್ ಜಮೀಲ್ ಅಕ್ತರ್ ಮತ್ತು ಕೆಡೆಟ್ ಮೌನಿಕಾ ನಿರೂಪಿಸಿದರು.
ಸುಂಟಿಕೊಪ್ಪ: ದೇಶದ ಸಾರ್ವಭೌಮತ್ವ, ಏಕತೆ, ಸಮಗ್ರತೆಯನ್ನು ಕಾಪಾಡಿಕೊಳ್ಳುವ ಪ್ರಜಾಪ್ರಭುತ್ವ ಮೌಲ್ಯಗಳನ್ನು ಉಳಿಸಿ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡುತ್ತಿರುವ ಭಾರತದ ಸಂವಿಧಾನ ಅತೀ ಶ್ರೇಷ್ಠವಾದುದು ಎಂದು ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಬೆಳ್ಳಿಯಪ್ಪ ಹೇಳಿದರು.
ಇಲ್ಲಿನ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಆಚರಿಸಲಾದ 70ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಭಾಷಣ ನೀಡಿದರು. ಮುಖ್ಯ ಅತಿಥಿ ತಾ.ಪಂ. ಸದಸ್ಯೆ ಓಡಿಯಪ್ಪನ ವಿಮಲಾವತಿ ಮಾತನಾಡಿ, ವಿದ್ಯಾರ್ಥಿಗಳು ಗುರಿ ಇಟ್ಟುಕೊಳ್ಳಬೇಕು ಛಲದಿಂದ ಗುರಿಯನ್ನು ತಲುಪಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದರು.
ಮತ್ತೋರ್ವ ಮುಖ್ಯ ಅತಿಥಿ ಸುಂಟಿಕೊಪ್ಪ ಠಾಣಾಧಿಕಾರಿ ಜಯರಾಂ ಮಾತನಾಡಿದರು. ಗ್ರಾ.ಪಂ. ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್ ಗಣರಾಜ್ಯೋತ್ಸವ ಹಾಗೂ ಸಂವಿಧಾನವನ್ನು ಗೌರವಿಸಬೇಕೆಂದರು.
ಪೊಲೀಸ್ ಸಿಬ್ಬಂದಿ ಧ್ವಜಾವಂದನೆ, ವಿವಿಧ ಶಾಲಾ ಮಕ್ಕಳು ಪಥಸಂಚಲನ, ದೇಶಭಕ್ತಿ ಗೀತೆಗಳನ್ನು ಹಾಡಿದರು. ಸುಂಟಿಕೊಪ್ಪ ಸರಕಾರಿ ಪ್ರಾಥಮಿಕ ಶಾಲೆ, ಸರಕಾರಿ ಪ್ರೌಢಶಾಲೆ, ಸರಕಾರಿ ಪದವಿಪೂರ್ವ ಕಾಲೇಜು, ಸಂತ ಮೇರಿ ಆಂಗ್ಲ ಮಾದ್ಯಮ ಶಾಲೆ, ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಗ್ರಾ.ಪಂ. ಉಪಾಧ್ಯಕ್ಷ ಪಿ.ಆರ್. ಸುಕುಮಾರ್, ಸದಸ್ಯರುಗಳಾದ ಸೋಮಯ್ಯ, ನಾಗರತ್ನ, ರಹೆನಾ ಸುಲ್ತಾನ, ಸರಕಾರಿ ಪದವಿ ಕಾಲೇಜು ಪ್ರಾಂಶುಪಾಲ ಜಾನ್, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ, ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧಾಯಿನಿ ಗೀತಾ, ಸಂತಮೇರಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಸೆಲ್ವರಾಜ್, ಸಂತ ಅಂತೋಣಿ ಶಾಲೆಯ ಮುಖ್ಯೋಪಾಧ್ಯಾಯನಿ ಮೀರಾ, ಸುಂಟಿಕೊಪ್ಪ ಲಯನ್ಸ್ ಕ್ಲಬ್ ಅಧ್ಯಕ್ಷ ಗಣೇಶ ಮೊದಲಾದವರು ಪಾಲ್ಗೊಂಡಿದ್ದರು.
ಕುಶಾಲನಗರ: ಕುಶಾಲನಗರ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಮುಖ್ಯಾಧಿಕಾರಿ ಸುಜಯ್‍ಕುಮಾರ್ ಧ್ವಜಾರೋಹಣ ನೆರವೇರಿಸಿದರು. ಪ.ಪಂ. ಸದಸ್ಯರುಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕುಶಾಲನಗರ ಮಾಜಿ ಸೈನಿಕರ ಸಂಘದಲ್ಲಿ ಸಂಘದ ಅಧ್ಯಕ್ಷ ಸಾರ್ಜೆಂಟ್ ಎಂ.ಎನ್. ಮೊಣ್ಣಪ್ಪ ಧ್ವಜಾರೋಹಣ ನೆರವೇರಿಸಿದರು. ಸಂಘದ ಸದಸ್ಯರು ಉಪಸ್ಥಿತರಿದ್ದರು.
ಗಣರಾಜ್ಯೋತ್ಸವ ಅಂಗವಾಗಿ ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಅಧ್ಯಕ್ಷ ರಘು ಹೆಬ್ಬಾಲೆ ಧ್ವಜಾರೋಹಣ ನೆರವೇರಿಸಿದರು.
ವಿಎಸ್‍ಎಸ್‍ಎನ್ ಸಂಘದ ನೂತನ ಕಚೇರಿಯಲ್ಲಿ ಸಂಘದ ಅಧ್ಯಕ್ಷ ಟಿ.ಆರ್. ಶರವಣಕುಮಾರ್ ಧ್ವಜಾರೋಹಣ ನೆರವೇರಿಸಿದರು.
ಕುಶಾಲನಗರ ಮಾರುತಿ ವಿದ್ಯಾಸಂಸ್ಥೆ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಸಂಸ್ಥೆಯ ಮುಖ್ಯಸ್ಥ ಜಿ.ಎಲ್. ನಾಗರಾಜ್ ನೇತೃತ್ವದಲ್ಲಿ ಶಾಲೆಯ ವಿದ್ಯಾರ್ಥಿಗಳಿಂದ ಪಟ್ಟಣದ ಮುಖ್ಯ ಬೀದಿಗಳಲ್ಲಿ ರಾಷ್ಟ್ರಧ್ವಜದ ಮೆರವಣಿಗೆ ನಡೆಯಿತು.
ಕೂಡಿಗೆ: ಕೂಡಿಗೆಯ ಪದವಿಪೂರ್ವ ಕಾಲೇಜಿನಲ್ಲಿ 70ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಧ್ವಜಾರೋಹಣವನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ.ಕೆ. ನಾಗರಾಜಶೆಟ್ಟೆ ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲ ಮಹಾಲಿಂಗಯ್ಯ ವಹಿಸಿದ್ದರು.
ದಿನದ ಮಹತ್ವದ ಬಗ್ಗೆ ರಾಜ್ಯಶಾಸ್ತ್ರ ಉಪನ್ಯಾಸಕ ರಮೇಶ್ ಮಾತನಾಡಿದರು. ವಿದ್ಯಾರ್ಥಿಗಳಿಂದ ಭಾಷಣ ಮತ್ತು ಹಾಡುಗಾರಿಕೆ ನಡೆದವು. ವೇದಿಕೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಜಗದೀಶ್, ರಾಮಸ್ವಾಮಿ ಸೇರಿದಂತೆ ಕಾಲೇಜು ಉಪನ್ಯಾಸಕ ವೃಂದ ಭಾಗವಹಿಸಿದ್ದರು.ಸೋಮವಾರಪೇಟೆ: ಸೋಮವಾರಪೇಟೆಯ ವಿವಿಧ ಶಾಲಾ-ಕಾಲೇಜು, ಸಂಘ-ಸಂಸ್ಥೆಗಳ ವತಿಯಿಂದ 70ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಮಾಜಿ ಸೈನಿಕರ ಸಂಘ: ಇಲ್ಲಿನ ಜೈ ಜವಾನ್ ಮಾಜಿ ಸೈನಿಕರ ಸಂಘದ ವತಿಯಿಂದ ಕಚೇರಿ ಮುಂಭಾಗದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಅಧ್ಯಕ್ಷ ಬಿ.ಆರ್. ಈರಪ್ಪ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಸಂಘದ ಉಪಾಧ್ಯಕ್ಷ ನಾಗರಾಜು, ಕಾರ್ಯದರ್ಶಿ ಬಸಪ್ಪ, ಖಜಾಂಚಿ ಎಂ.ಕೆ. ಸುಕುಮಾರ್, ಲೆಕ್ಕಪರಿಶೋಧಕರಾದ ಎ.ಕೆ. ಮಾಚಯ್ಯ ಉಪಸ್ಥಿರಿದ್ದರು.
ಕಸಾಪ: ಇಲ್ಲಿನ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ ತಾಲೂಕು ಸಾಹಿತ್ಯ ಪರಿಷತ್, ನಗರ ಪತ್ರಕರ್ತರ ಸಂಘ, ಸರ್ಕಾರಿ ನಿವೃತ್ತ ನೌಕರರ ಸಂಘ, ಜಾನಪದ ಪರಿಷತ್ ವತಿಯಿಂದ 70ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು.
ಉದ್ಯಮಿ ಕಿರಣ್‍ಕುಮಾರ್, ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಡಿ. ವಿಜೇತ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಹಾಲೇಬೇಲೂರು ನಿರ್ವಾಣಿ ಶೆಟ್ಟಿ, ಜಾನಪದ ಪರಿಷತ್ ಹೋಬಳಿ ಘಟಕದ ಅಧ್ಯಕ್ಷ ಎಸ್.ಎ. ಮುರಳೀಧರ್, ಪ.ಪಂ. ಸದಸಯೆ ನಳಿನಿ ಗಣೇಶ್, ವಿಎಸ್‍ಎಸ್‍ಎನ್ ನಿರ್ದೇಶಕಿ ಸುಮಾ ಸುದೀಪ್, ಪ್ರಮುಖರಾದ ಬಿ.ಟಿ. ತಿಮ್ಮಶೆಟ್ಟಿ, ನ.ಲ. ವಿಜಯ ಮತ್ತಿತರರು ಉಪಸ್ಥಿತರಿದ್ದರು.
ಆಟೋ ಚಾಲಕರ ಸಂಘ: ಇಲ್ಲಿನ ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಸಂಘದ ಅಧ್ಯಕ್ಷ ಮೋಹನ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಸಂಘದ ಕಾರ್ಯದರ್ಶಿ ಗಂಗಾಧರ್, ಖಜಾಂಚಿ ಬೇಟು ಸೇರಿದಂತೆ ಸಂಘದ ಸದಸ್ಯರು ಪಾಲ್ಗೊಂಡಿದ್ದರು.
ವಿಎಸ್‍ಎಸ್‍ಎನ್: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಕಾಫಿ ಮಂಡಳಿ ಸೋಮವಾರಪೇಟೆ ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ವಿಎಸ್‍ಎಸ್‍ಎನ್ ಅಧ್ಯಕ್ಷ ಬಿ.ಡಿ. ಮಂಜುನಾಥ್‍ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಸಂಘದ ಉಪಾಧ್ಯಕ್ಷ ಕೆ.ಜಿ. ಸುರೇಶ್, ನಿರ್ದೇಶಕರುಗಳು, ಸಿಬ್ಬಂದಿ ವರ್ಗ, ಕಾಫಿ ಮಂಡಳಿಯ ಅಧಿಕಾರಿಗಳು ಹಾಗೂ ನೌಕರ ವರ್ಗದವರು ಹಾಜರಿದ್ದರು.
ಐಗೂರು: ಐಗೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಗಣರಾಜ್ಯೋತ್ಸವ ನೆರವೇರಿತು. ದಿನದ ಮಹತ್ವದ ಕುರಿತು ಪ್ರಬಾರ ಪ್ರಾಂಶುಪಾಲ ಹೆಚ್.ಕೆ. ಉಮೇಶ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷ ಈರಪ್ಪ, ಗ್ರಾ.ಪಂ. ಮಾಜಿ ಅಧ್ಯಕ್ಷ ಡಿ.ಎಸ್. ಚಂಗಪ್ಪ, ಶಾಲಾ ಮುಖ್ಯ ಶಿಕ್ಷಕ ಯಶವಂತ್ ಕುಮಾರ್ ಹಾಗೂ ಸಹಶಿಕ್ಷಕರು ಹಾಜರಿದ್ದರು. ಇದೇ ಸಂದರ್ಭ ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ನಂತರ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.
ಸುಂಟಿಕೊಪ್ಪ: ಕಾನ್‍ಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಹಾಗೂ ಮಕ್ಕಳ ಸಂತೆ ಕಾರ್ಯಕ್ರಮವನ್ನು ನಡೆಸಲಾಯಿತು. ನಾಕೂರು-ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಂಜನಿ ಅಧ್ಯಕ್ಷತೆ ವಹಿಸಿದ್ದರು.
ಶಾಲೆಯ ವಿದ್ಯಾರ್ಥಿಗಳ ಪಥಸಂಚಲನ ಗಮನಸಳೆಯಿತು. ಗಣರಾಜ್ಯೋತ್ಸವದ ಬಗ್ಗೆ ಮುಖ್ಯ ಅತಿಥಿಗಳಾಗಿದ್ದ ಕಾನ್‍ಬೈಲ್ ಕಾಫಿ ತೋಟದ ವ್ಯವಸ್ಥಾಪಕ ಪಿ.ಜಿ. ಹೆಗ್ಢೆ ಮಾತನಾಡಿದರು.
ಶಾಲೆಯ ವಿದ್ಯಾರ್ಥಿಗಳು ಮನೆಯಿಂದ ತಂದಿದ್ದ ಟೊಮೊಟೊ, ಅಳಸಂಡೆ, ಬೀನ್ಸ್, ನುಗ್ಗೆ ಸೊಪ್ಪು, ಮೆಣಸು, ಬಾಳೆಕಾಯಿ, ಪುದಿನಸೊಪ್ಪು, ಕಹಿಹುಳಿ, ಕಬ್ಬು, ಬೂದಿಕುಂಬಳ, ಎಳನೀರು, ಸಪೋಟವನ್ನು ಪೋಷಕರುಗಳು ಜನಪ್ರತಿನಿಧಿಗಳು ಖರೀದಿಸಿದರು.
ನಾಕೂರು-ಶಿರಂಗಾಲ ಗ್ರಾ.ಪಂ. ಉಪಾಧ್ಯಕ್ಷೆ ಯಶೋಧ, ಸದಸ್ಯರುಗಳಾದ ಚಂದ್ರಶೇಖರ, ಸತೀಶ, ಎಸ್‍ಡಿಎಂಸಿ ಉಪಾಧ್ಯಕ್ಷರು ಸದಸ್ಯರು ಶಾಲಾ ಮುಖ್ಯಾಪಾಧ್ಯಾಯ ಚೆನ್ನಪ್ಪ, ಸಹ ಶಿಕ್ಷಕರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಕ ಅಬ್ಬಾಸ್ ವಂದಿಸಿದರು.
ನಾಪೋಕ್ಲು: ಇಲ್ಲಿನ ಮದೀನ ಮಸೀದಿಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ನಾಪೋಕ್ಲುವಿನ ಪೊಲೀಸ್ ಠಾಣೆಯ ಎಎಸ್‍ಐ ನಾಗರಾಜ್ ಧ್ವಜಾರೋಹಣ ನೆರವೇರಿಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲ ಅಬ್ದುಲ್ ರಿಯಾಜ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಎಸ್‍ಐ ವಿಶ್ವನಾಥ್, ಸೇಕ್ರೆಡ್ ಹಾರ್ಟ್ ಶಾಲೆಯ ಶಿಕ್ಷಕ ಸುನಿಲ್, ಮಸೀದಿಯ ಇಮಾಂ ಹಾಗೂ ಗಣ್ಯರು ಉಪಸ್ಥಿತರಿದ್ದು ದಿನದ ಮಹತ್ವದ ಕುರಿತು ಮಾತನಾಡಿದರು.
ಈ ಸಂದರ್ಭ ಮಸೀದಿಯ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಆಟೋಟ ಸ್ಪರ್ಧೆಗಳ ವಿಜೇತರಿಗೆ ವೇದಿಕೆಯಲ್ಲಿದ್ದ ಗಣ್ಯರು ಬಹುಮಾನ ವಿತರಿಸಿದರು. ಕಾರ್ಯಕ್ರಮದಲ್ಲಿ ಎಂ.ಎಂ. ಸೌಕತ್ ಆಲಿ, ಮಸೀದಿ ಕಾರ್ಯದರ್ಶಿ ಎಂ.ಎಂ. ಅಬ್ದುಲ್ ನಜೀರ್ ಉಪಸ್ಥಿತರಿದ್ದು ಎಂ.ಎಸ್. ಸಲೀಂ ಸ್ವಾಗತಿಸಿ, ಮಸೀದಿ ಅಧ್ಯಕ್ಷ ಮಹಮದ್ ರಫಿ ವಂದಿಸಿದರು.ಶನಿವಾರಸಂತೆ: ಅಖಂಡ ಭಾರತ ರೂಪುಗೊಳ್ಳಲು ಕಾರಣಕರ್ತರಾದ ಮಹಾನ್ ದೇಶ ನಾಯಕರೊಂದಿಗೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಸ್ಮರಿಸಿ, ಗೌರವ ಸಲ್ಲಿಸುವ ಸುದಿನವೇ ಗಣರಾಜ್ಯೋತ್ಸವ ಆಚರಣೆಯಾಗಿದೆ ಎಂದು ಶಿಕ್ಷಕ ಸಿ.ಎಸ್. ಸತೀಶ್ ಅಭಿಪ್ರಾಯಪಟ್ಟರು.
ಸಮೀಪದ ಮುಳ್ಳೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 70ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಮಣಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸೇರಿ ಶಾಲಾ ಆವರಣದಲ್ಲಿ ನಿರ್ಮಿಸಿದ ಅಖಂಡ ಭಾರತದ ಮಾದರಿಯನ್ನು ಅಲಂಕೃತಗೊಳಿಸಲಾಯಿತು. ಹರಿದು ಹಂಚಿಹೋಗಿದ್ದ ಅಖಂಡ ಭಾರತವನ್ನು ರೂಪುಗೊಳಿಸಿದ ಬಗ್ಗೆ ಹಾಗೂ ಸಂವಿಧಾನ ಜಾರಿಗೆ ಬಂದದ್ದು, ಅದರ ವೈಶಿಷ್ಟ್ಯದ ಬಗ್ಗೆ ಮಾಹಿತಿ ನೀಡಿ ವಿದ್ಯಾರ್ಥಿಗಳಲ್ಲಿ ದೇಶ ಪ್ರೇಮದ ಜಾಗೃತಿ ಮೂಡಿಸಲಾಯಿತು. ಮುಖ್ಯ ಶಿಕ್ಷಕ ಮಂಜುನಾಥ್, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಗುಲಾಬಿ, ರೇಣುಕಾ, ಜಯ, ಪವಿತ್ರಾ, ಪುಷ್ಪಾ ಉಪಸ್ಥಿತರಿದ್ದರು.
ವೀರಾಜಪೇಟೆ: ಇಲ್ಲಿಗೆ ಸಮೀಪದ ಬಿ.ಸಿ. ಪ್ರೌಢಶಾಲೆ ದೇವಣಗೇರಿಯಲ್ಲಿ 70ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲಾ ಆಡಳಿತ ಮಂಡಳಿ ಆಡಳಿತಾಧಿಕಾರಿ ಪಿ.ಎ. ಲಕ್ಷ್ಮೀನಾರಾಯಣ ನೆರವೇರಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಕಾರ್ಯನಿರ್ವಹಣಾಧಿಕಾರಿ ಕರ್ನಂಡ ಯನ್. ಬೊಳ್ಳಮ್ಮ, ವಿದ್ಯಾರ್ಥಿಗಳು ದೇಶಭಕ್ತಿ ಹಾಗೂ ಮಹಾನ್ ನಾಯಕರ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಡಳಿತ ಬಂದದ್ದು, ಅದರ ವೈಶಿಷ್ಟ್ಯದ ಬಗ್ಗೆ ಮಾಹಿತಿ ನೀಡಿ ವಿದ್ಯಾರ್ಥಿಗಳಲ್ಲಿ ದೇಶ ಪ್ರೇಮದ ಜಾಗೃತಿ ಮೂಡಿಸಲಾಯಿತು. ಮುಖ್ಯ ಶಿಕ್ಷಕ ಮಂಜುನಾಥ್, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಗುಲಾಬಿ, ರೇಣುಕಾ, ಜಯ, ಪವಿತ್ರಾ, ಪುಷ್ಪಾ ಉಪಸ್ಥಿತರಿದ್ದರು.
ವೀರಾಜಪೇಟೆ: ಇಲ್ಲಿಗೆ ಸಮೀಪದ ಬಿ.ಸಿ. ಪ್ರೌಢಶಾಲೆ ದೇವಣಗೇರಿಯಲ್ಲಿ 70ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲಾ ಆಡಳಿತ ಮಂಡಳಿ ಆಡಳಿತಾಧಿಕಾರಿ ಪಿ.ಎ. ಲಕ್ಷ್ಮೀನಾರಾಯಣ ನೆರವೇರಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಕಾರ್ಯನಿರ್ವಹಣಾಧಿಕಾರಿ ಕರ್ನಂಡ ಯನ್. ಬೊಳ್ಳಮ್ಮ, ವಿದ್ಯಾರ್ಥಿಗಳು ದೇಶಭಕ್ತಿ ಹಾಗೂ ಮಹಾನ್ ನಾಯಕರ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಡಳಿತ ಶಾಲಾ ಮುಖ್ಯೋಪಾಧ್ಯಾಯ ರತೀಶ್ ರೈ ಮಾತನಾಡಿ, ವಿದ್ಯಾರ್ಥಿಗಳು ಸಂವಿಧಾನದ ಮಹತ್ವವನ್ನು ಅರಿತುಕೊಂಡು ತಮ್ಮ ಕೆಲಸ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತಾಗಬೇಕೆಂದರು.
ಈ ಸಂದರ್ಭ ವಿದ್ಯಾರ್ಥಿಗಳಿಂದ ಗಣರಾಜ್ಯೋತ್ಸವಕ್ಕೆ ಸಂಬಂಧಿಸಿದ ಭಾಷಣ, ದೇಶಭಕ್ತಿಗೆ ಸಂಬಂಧಿಸಿದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಗಿರೀಶ್ ಸ್ವಾಗತಿಸಿದರು. ಆಡಳಿತವರ್ಗ, ಶಿಕ್ಷಕ ವೃಂದ ವಿದ್ಯಾರ್ಥಿಗಳು ಹಾಜರಿದ್ದರು.
ಮಡಿಕೇರಿ: ಮಡಿಕೇರಿ ಆಕಾಶವಾಣಿ ಕೇಂದ್ರದಲ್ಲಿ ನಿಲಯದ ಕಾರ್ಯಕ್ರಮ ನಿರ್ವಾಹಕ ಡಾ. ವಿಜಯ ಅಂಗಡಿ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ನಿಲಯದ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಈ ಸಂದರ್ಭ ಸೆಕ್ಯೂರಿಟಿ ಗಾರ್ಡ್ ಸುಬ್ರಾಯ ಹಾಗೂ ಸಹಾಯಕಿ ಲಕ್ಷ್ಮಿ ಇವರುಗಳನ್ನು ಸನ್ಮಾನಿಸಲಾಯಿತು.ಗಾಳಿಬೀಡು: ಅಮ್ಮನ ಮಡಿಲು ಬಿಟ್ಟು ಶಾಲಾ ವಾತಾವರಣಕ್ಕೆ ಪರಿಸರ ಬದಲಿಸಿಕೊಳ್ಳುವ ಪುಟಾಣಿಗಳ ಜೀವನಕ್ಕೆ ಅಡಿಪಾಯ ಹಾಕುವದೇ ಶಿಕ್ಷಕರು ಎಂದು ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ ಹೇಳಿದರು.
ಮಡಿಕೇರಿ ಬಳಿಯ ಗಾಳಿಬೀಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ವಾರ್ಷಿಕೋತ್ಸವ ಮತ್ತು ಗಣರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಯಾವದೇ ಶಿಕ್ಷಕ, ವಿದ್ಯಾರ್ಥಿಗಳಿಗೆ ಕೇಡು ಬಯಸುವದಿಲ್ಲ. ತಾನುಗಳಿಸಿದ ಎಲ್ಲ ಜ್ಞಾನವನ್ನೂ ನಿಸ್ವಾರ್ಥವಾಗಿ ಧಾರೆಯೆರೆಯುತ್ತಾನೆ. ಕಷ್ಟ ಬಂತೆಂದು ವಿದ್ಯಾರ್ಥಿಗಳು ಶಿಕ್ಷಣವನ್ನು ಮೊಟಕುಗೊಳಿಸಿದರೆ ಜೀವನ ಅಭದ್ರವಾಗುತ್ತದೆ ಎಂದ ಅವರು, ಇಡೀ ಜಗತ್ತನ್ನು ತೂಗುವ ಶಕ್ತಿಯನ್ನು ದೇವರು ಹೆಣ್ಣಿಗೆ ನೀಡಿದ್ದು, ಆಕೆ ಮನಸು ಮಾಡಿದರೆ ಯಾವದೇ ಸಾಧನೆಗೂ ಸೈ ಎಂದು ಹೇಳಿದರು.
ದಾನಿಗಳಾದ ಅಚ್ಚಪಟ್ಟಿರ ಗಣೇಶ್ ಶಾಲೆಯ ಪ್ರತೀ ತರಗತಿಗೆ ಗಡಿಯಾರಗಳನ್ನು ಉದಾರವಾಗಿ ನೀಡಿದರು. ಇದೇ ವೇಳೆ ಶಿಕ್ಷಕರುಗಳಾದ ಅಕ್ಕಮ್ಮ, ರೆಸಿನಾ ಸಾಲ್ಡಾನ, ಗಾಯತ್ರಿ, ಗ್ರೆಟ್ಟ್ ಮೋನಿಷಾ, ಭಾಗೀರಥಿ ಹೆಗಡೆ, ಮುಖ್ಯ ಶಿಕ್ಷಕಿ ದಮಯಂತಿ ಮತ್ತು ಚಿತ್ತಾರ ವ್ಯವಸ್ಥಾಪಕ ನಿರ್ದೇಶಕಿ ಸವಿತಾ ರೈ ಅವರನ್ನು ಸನ್ಮಾನಿಸಲಾಯಿತು. ಸನ್ಮಾನದ ಜವಾಬ್ದಾರಿ ಹೊತ್ತಿದ್ದ ದಾನಿ ವಾಸುದೇವ್ ಸಂದರ್ಭೋಚಿತವಾಗಿ ಮಾತನಾಡಿದರು.
ವೇದಿಕೆಯಲ್ಲಿ ಎಸ್‍ಡಿಎಂಸಿ ಅಧ್ಯಕ್ಷ ಕೋಚನ ಮೋಹನ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರಾಣಿ ಮುತ್ತಣ್ಣ, ಸದಸ್ಯರುಗಳಾದ ಸುಭಾಷ್ ಆಳ್ವ, ಕುಮಾರಿ ಮತ್ತಿತರರು ಹಾಜರಿದ್ದರು.
*ಗೋಣಿಕೊಪ್ಪಲು: ಭಾರತ ಪ್ರಜಾಪ್ರಭುತ್ವ ಸಾರ್ವಭೌಮ ರಾಷ್ಟ್ರವಾಗಿದ್ದು, ಇದರ ಪರಿಕಲ್ಪನೆಯನ್ನು ಯುವ ಜನಾಂಗಕ್ಕೆ ಮನವರಿಕೆ ಮಾಡಿಕೊಡಬೇಕಾಗಿದೆ ಎಂದು ವೀರಾಜಪೇಟೆ ಹಿರಿಯ ವಕೀಲ ಪ್ರಶಾಂತ್ ಚಿಣ್ಣಪ್ಪ ಹೇಳಿದರು.
ಗೋಣಿಕೊಪ್ಪಲಿನ ಕೂರ್ಗ್ ಪಬ್ಲಿಕ್ ಶಾಳೆಯಲ್ಲಿ (ಕಾಪ್ಸ್) ನಡೆದ 70ನೇ ಗಣರಾಜ್ಯೋತ್ಸವದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಜಾಸತ್ತಾತ್ಮಕ ರಾಷ್ಟ್ರದಲ್ಲಿ ಪ್ರಜೆಗಳೇ ಪ್ರಭುಗಳಾಗಿದ್ದಾರೆ. ಇದರ ಬಗ್ಗೆ ಸಂವಿಧಾನದಲ್ಲಿ ಸ್ಪಷ್ಟ ಉಲ್ಲೇಖವಿದೆ. ಯುವ ಜನಾಂಗ ಸಂವಿಧಾನವನ್ನು ಸ್ಪಷ್ಟವಾಗಿ ಅರ್ಥೈಸಿಕೊಳ್ಳಬೇಕು ಎಂದು ಕರೆ ನೀಡಿದರು.
ಪರಿಕೀಯರ ಆಕ್ರಮಣಕ್ಕೆ ಒಳಗಾಗಿದ್ದ ರಾಷ್ಟ್ರವನ್ನು ಹಿರಿಯರು ಹೋರಾಡಿ ಮುಕ್ತಗೊಳಿಸಿದರು. ಇದು ಮತ್ತೆ ಪರಕೀಯರ ದಾಸ್ಯಕ್ಕೆ ಒಳಗಾಗದಂತೆ ಎಚ್ಚರವಹಿಸಬೇಕಾಗಿದೆ ಎಂದರು. ಪ್ರಾಂಶುಪಾಲ ಬೆನ್ನಿಕೊರಿಯ ಕೋಸ್ ಹಾಜರಿದ್ದರು.
ಮಡಿಕೇರಿ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ 70ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷÀ ಕೆ.ಯು. ಅಬ್ದುಲ್ ರಜಾûಕ್ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಸದಸ್ಯ ಎಂ.ಎ. ಉಸ್ಮಾನ್, ಓಂಕಾರೇಶ್ವರ ದೇವಾಲಯ ಸಮಿತಿ ಆಧ್ಯಕ್ಷ ಪುಲಿಯಂಡ ಜಗದೀಶ್, ನಗರಸಭಾ ಸದಸ್ಯರಾದ ಜುಲೇಕಾಬಿ, ಪ್ರಕಾಶ್ ಆಚಾರ್ಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಫ್ಯಾನ್ಸಿ ಪಾರ್ವತಿ, ನಗರ ಯುವ ಕಾಂಗ್ರೆಸ್ ಅಧ್ಯಕ್ಷÀ ಸದಾ ಮುದ್ದಪ್ಪ, ಹಿಂದುಳಿದ ಘಟಕದ ಅಧ್ಯಕ್ಷ ಜಿ.ಸಿ. ಜಗದೀಶ್, ಉಪಾದ್ಯಕ್ಷೆ ಶಶಿ, ಸ್ವರ್ಣಲತಾ, ಪ್ರಭು ರೈ, ಮುನೀರ್ ಮಾಚರ್, ಮಹಮ್ಮದ್ ಹಯಾತ್, ರವಿ ಗೌಡ, ಪ್ರೇಮ ಕೃಷ್ಣಪ್ಪ, ಮಮ್ತಾಜ್ ಬೇಗಂ, ರಾಣಿ, ಹನೀಫ್ ಹಾಗೂ ಕಾರ್ಯಕರ್ತರು ಹಾಜರಿದ್ದರು. ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರ್.ಪಿ. ಚಂದ್ರಶೇಖರ್ ಸ್ವಾಗತಿಸಿ, ವಂದಿಸಿದರು.