ಚೆಟ್ಟಳ್ಳಿ, ಜ. 29: ರಾಷ್ಟ್ರ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚೆನ್ನಯ್ಯನ ಕೋಟೆ ಸರ್ಕಾರಿ ಶಾಲೆಯ ಶಿಕ್ಷಕಿ ಬಿ.ಬಿ ಜಾಜಿ ಮೋಹನ್ ಆಯ್ಕೆಯಾಗಿದ್ದಾರೆ.

ಛತ್ತೀಸ್‍ಗಢ ರಾಜ್ಯದ ರಾಯಪುರದಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಕೊಡಗು ಜಿಲ್ಲೆಯ ಏಕೈಕ ಮಹಿಳಾ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ

ರಾಯ್‍ಪುರದ ಸ್ವಾಮಿ ವಿವೇಕಾನಂದ ಸ್ಟೇಡಿಯಂನಲ್ಲಿ ತಾ. 28 ರಿಂದ 31 ರವರಗೆ ನಡೆಯುವ ಆಲ್ ಇಂಡಿಯಾ ಸಿವಿಲ್ ಸರ್ವಿಸ್ ಅಥ್ಲೆಟಿಕ್ ಟೂರ್ನಮೆಂಟ್ ಕ್ರೀಡಾಕೂಟದಲ್ಲಿ ಭಾಗವಹಿಸಿರುವ ಬಿ.ಬಿ ಜಾಜಿ ವೀರಾಜಪೇಟೆ ತಾಲೂಕಿನ ಚೆನ್ನಯ್ಯನ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿದ್ದಾರೆ.

ರಾಜ್ಯ ಪ್ರಶಸ್ತಿ ವಿಜೇತೆ ಶಿಕ್ಷಕಿಯಾಗಿರುವ ಜಾಜಿ ಬಾರದ ಗುಂಡು ಎಸೆತ, ರಿಲೇ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ರಾಜ್ಯ, ರಾಷ್ಟ್ರ, ಅಂತಾರ್ರಾಷ್ಟ್ರೀಯ ಮಟ್ಟದಲ್ಲೂ ಸಾಧನೆ ಮಾಡಿ. ಕರ್ನಾಟಕದ ಅಥ್ಲೆಟಿಕ್ ತಂಡದ ಟೀಂ ಮ್ಯಾನೇಜರ್ ಆಗಿಯೂ ಆಯ್ಕೆಯಾಗಿದ್ದಾರೆ.

ಶಾಲೆಯ ವಿದ್ಯಾರ್ಥಿಗಳಿಗೆ ಕ್ರೀಡೆ, ಸಾಂಸ್ಕೃತಿಕ,ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸ್ಕೌಟ್ಸ್ ಗೈಡ್ಸ್‍ನಲ್ಲೂ ತೊಡಗಿಸಿಕೊಂಡಿರುವ ಸಿದ್ದಾಪುರ ಸಮೀಪದ ಇಂಜಿಲಗೆರೆ ನಿವಾಸಿ ಮೋಹನ್ ಕುಮಾರ್ ಅವರ ಪತ್ನಿಯಾಗಿದ್ದಾರೆ.