ಸೋಮವಾರಪೇಟೆ, ಜ. 29: ಹರಗ ಗ್ರಾಮಸ್ಥರ ದಶಕಗಳ ಬೇಡಿಕೆಯಾಗಿರುವ ಸೇತುವೆ ನಿರ್ಮಾಣಕ್ಕೆ ಇದೀಗ ಕಾಲ ಕೂಡಿಬಂದಿದ್ದು, ಲೋಕೋಪಯೋಗಿ ಇಲಾಖಾ ವತಿಯಿಂದ ರೂ. 70ಲಕ್ಷ ವೆಚ್ಚದಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.

ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ನೂತನ ಸೇತುವೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ಕಳೆದ ಅನೇಕ ವರ್ಷಗಳಿಂದ ಶಿಥಿಲಾವಸ್ಥೆಗೆ ತಲುಪಿದ್ದ ಬೆಟ್ಟದಳ್ಳಿ-ಹರಗ ಸೇತುವೆಯ ಮೇಲೆ ಸಂಚರಿಸಲು ಸಾರ್ವಜನಿಕರೂ ಭಯಪಡುತ್ತಿದ್ದರು.

ಶಿಥಿಲಾವಸ್ಥೆಯಲ್ಲಿದ್ದ ಸೇತುವೆಯ ಬದಲಿಗೆ ನೂತನ ಸೇತುವೆ ನಿರ್ಮಿಸುವಂತೆ ಅನೇಕ ಬಾರಿ ಸಾರ್ವಜನಿಕರು ಲೋಕೋಪಯೋಗಿ ಇಲಾಖಾ ಕಚೇರಿ ಎದುರು ಪ್ರತಿಭಟನೆಯನ್ನೂ ಮಾಡಿದ್ದರು. ಇದೀಗ ಸರ್ಕಾರದಿಂದ ರೂ. 70 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಲೋಕೋಪಯೋಗಿ ಇಲಾಖೆ ಸಾರ್ವಜನಿಕರು ಲೋಕೋಪಯೋಗಿ ಇಲಾಖಾ ಕಚೇರಿ ಎದುರು ಪ್ರತಿಭಟನೆಯನ್ನೂ ಮಾಡಿದ್ದರು. ಇದೀಗ ಸರ್ಕಾರದಿಂದ ರೂ. 70 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಲೋಕೋಪಯೋಗಿ ಇಲಾಖೆ ಸದಸ್ಯ ಎಸ್.ಜಿ. ಮೇದಪ್ಪ, ತಾ.ಪಂ. ಮಾಜೀ ಅಧ್ಯಕ್ಷ ಕೆ.ಎಂ. ಲೋಕೇಶ್, ಗ್ರಾ.ಪಂ. ಸದಸ್ಯ ತ್ರಿಶೂಲ್, ಅಭಿಯಂತರ ರಮಣಗೌಡ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.