ಮಡಿಕೇರಿ, ಜ.28: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಇದೇ ಪ್ರಥಮ ಬಾರಿಗೆ ಹಮ್ಮಿಕೊಂಡಿರುವ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಹಿಳೆಯರಿಗೆ ಜಿಲ್ಲಾ ಮಟ್ಟದ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದೆ. ಫೆ. 3ರಂದು ಬೆಳಿಗ್ಗೆ 8ರಿಂದ 9 ಗಂಟೆವರೆಗೆ ಕಣಿವೆಯ ರಾಮಲಿಂಗೇಶ್ವರ ದೇವಾಲಯ ಆವರಣದಲ್ಲಿ ಸ್ಪರ್ಧೆ ನಡೆಯಲಿದೆ. ವಿಜೇತರಾಗುವ ಮೂವರಿಗೆ ನಗದು ಬಹುಮಾನದೊಂದಿಗೆ ಪಾರಿತೋಷಕ, ಪ್ರಶಂಸನಾ ಪತ್ರ ನೀಡಲಾಗುವದು. ಭಾಗವಹಿಸುವ ಎಲ್ಲಾ ಸ್ಪರ್ಧಿಗಳಿಗೂ ಪ್ರಶಂಸನಾ ಪತ್ರ ನೀಡಲಾಗುವದು. ಹೆಚ್ಚಿನ ಮಾಹಿತಿಗಾಗಿ ಸ್ಪರ್ಧೆಯ ಸಂಚಾಲಕರುಗಳಾದ ಉಷಾರಾಣಿ (9900474485), ಲಕ್ಷ್ಮಿಹರೀಶ್ (9035390453) ಇವರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಕಸಾಪ ಅಧ್ಯಕ್ಷ ಲೋಕೇಶ್ ಸಾಗರ್ ತಿಳಿಸಿದ್ದಾರೆ.