ಮಡಿಕೇರಿ, ಜ.28: ಜಿಲ್ಲಾಡಳಿತ, ಸರ್ವೋದಯ ಸಮಿತಿ, ನಗರಸಭೆ, ಕನ್ನಡ ಮತ್ತು ಸಂಸ್ಕøತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿ ಕಾರ್ಯಕ್ರಮವು ತಾ. 30 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಮಂಟಪದಲ್ಲಿ ನಡೆಯಲಿದೆ.

‘ಹುತಾತ್ಮರ ದಿನಾಚರಣೆ’ ಪ್ರಯುಕ್ತ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮವನ್ನು ಜಿಲ್ಲಾ ಖಜಾನೆಯಿಂದ ಮೆರವಣಿಗೆ ಮೂಲಕ ಪೊಲೀಸ್ ಗೌರವ ರಕ್ಷೆಯೊಂದಿಗೆ ಜನರಲ್ ತಿಮ್ಮಯ್ಯ ವೃತ್ತದ ಮೂಲಕ ತೆಗೆದುಕೊಂಡು ಹೋಗಿ ಗಾಂಧಿ ಮಂಟಪದಲ್ಲಿರಿಸಿ ಮೌನ ಆಚರಿಸಿ ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಎಲ್ಲರೂ ಎದ್ದು ನಿಂತು 2 ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಲಾಗುತ್ತದೆ ಎಂದು ಸರ್ವೋದಯ ಸಮಿತಿ ತಿಳಿಸಿದೆ.