ಮಡಿಕೇರಿ, ಜ. 29: ಮಡಿಕೇರಿ ತಾಲೂಕು ಬಿಜೆಪಿಯ ಸಭೆ ಫೆ. 1 ರಂದು ಬೆಳಿಗ್ಗೆ 11 ಗಂಟೆಗೆ ಮಡಿಕೇರಿಯ ಬಾಲಭವನದಲ್ಲಿ ನಡೆಯಲಿದೆ. ಸಭೆಯಲ್ಲಿ ಶಾಸಕರುಗಳಾದ ಕೆ.ಜಿ. ಬೋಪಯ್ಯ, ಅಪ್ಪಚ್ಚು ರಂಜನ್ ಹಾಗೂ ವಿಧಾನಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಾಲೂಕು ಅಧ್ಯಕ್ಷ ತಳೂರು ಎ. ಕಿಶೋರ್ ಕುಮಾರ್ ತಿಳಿಸಿದ್ದಾರೆ.