ನಾಪೆÇೀಕ್ಲು, ಜ. 30: ನಾಪೆÇೀಕ್ಲು ಪ್ರಥಮ ದರ್ಜೆ ಕಾಲೇಜಿನ ತೃತೀಯ ಬಿಎ ವಿದ್ಯಾರ್ಥಿ ಲವಿನ್ ಲೋಪೇಸ್ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಾಮಾಜಿಕ ಕಾಳಜಿ ಹಾಗೂ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ 2019ನೇ ಸಾಲಿನ ಈ ಪ್ರತಿಷ್ಠಿತ ಪ್ರಶಸ್ತಿಗೆ ಲೋಪೇಸ್ ಅವರನ್ನು ಆಯ್ಕೆಗೊಳಿ¸ Àಲಾಗಿದೆ. ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಮುದ್ದೇಬಿಹಾಳ ತಾಲೂಕು ಯುವ ಸಂಘಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ ಸ್ವಾಮಿ ವಿವೇಕಾನಂದ ಜಯಂತೋತ್ಸವ ಹಾಗೂ ರಾಜ್ಯ ಯುವ ಸಮ್ಮೇಳನ ಮತ್ತು ವಿವೇಕಾನಂದ ಸದ್ಭಾವನಾ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಸಾಂಸ್ಕøತಿಕ ಯುವ ವೈಭವ ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಪ್ರಶಸ್ತಿ ನೀಡಲಾಗುತ್ತಿದೆ.