ಸೋಮವಾರಪೇಟೆ, ಜ. 30: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲೆಯ ಪತ್ರಕರ್ತರ ತಂಡಗಳ ನಡುವೆ ಫೆ. 17ರಂದು ಸಮೀಪದ ಗೌಡಳ್ಳಿ ಗ್ರಾಮದ ಬಿಜಿಎಸ್ ವಿದ್ಯಾಸಂಸ್ಥೆ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ ಎಂದು ಕ್ರೀಡಾಕೂಟದ ಸಂಚಾಲಕ ಎಸ್.ಎ. ಮುರಳೀಧರ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಪತ್ರಕರ್ತರನ್ನು ಒಗ್ಗೂಡಿಸುವ ಮೂಲಕ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು, ಸೋಮವಾರಪೇಟೆ ತಾಲೂಕು ಪತ್ರಕರ್ತರ ಸಂಘದ ಪ್ರಥಮ ಅಧ್ಯಕ್ಷರಾಗಿದ್ದ ದಿ. ಸಿ.ಎನ್. ಸುನಿಲ್ಕುಮಾರ್ ಹೆಸರಿನಲ್ಲಿ ಪಂದ್ಯಾವಳಿ ನಡೆಯಲಿದೆ ಎಂದರು.
ಫೆ. 17ರಂದು ಪೂರ್ವಾಹ್ನ 9 ಗಂಟೆಗೆ ಪಂದ್ಯಾವಳಿಯ ಉದ್ಘಾಟನೆ ನಡೆಯಲಿದ್ದು, ನಂತರ ಸೋಮವಾರಪೇಟೆ, ವೀರಾಜಪೇಟೆ, ಮಡಿಕೇರಿ ಮತ್ತು ದೃಶ್ಯಮಾಧ್ಯಮ ತಂಡಗಳ ನಡುವೆ ಪಂದ್ಯಾಟ ನಡೆಯಲಿದೆ. ವಿಜೇತ ತಂಡಗಳಿಗೆ ಪಾರಿತೋಷಕ ನೀಡಲಾಗುವದು ಎಂದು ಮುರಳೀಧರ್ ಮಾಹಿತಿ ನೀಡಿದರು.
ಗೋಷ್ಠಿಯಲ್ಲಿ ತಾಲೂಕು ಸಂಘದ ಅಧ್ಯಕ್ಷ ಹಾಗೂ ಕ್ರೀಡಾಕೂಟದ ಖಜಾಂಚಿ ಹರೀಶ್ಕುಮಾರ್, ಸಹ ಸಂಚಾಲಕ ಡಿ.ಪಿ. ಲೋಕೇಶ್, ಎಸ್. ಮಹೇಶ್, ಸದಸ್ಯ ದಿನೇಶ್ ಮಾಲಂಬಿ ಉಪಸ್ಥಿತರಿದ್ದರು.