ಕೂಡಿಗೆ, ಜ. 30: ಕೂಡಿಗೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಯ ಸಭೆಯು ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಲಕ್ಷ್ಮಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಯಿತು. ಈಗ ದೊರೆಯುವ ಸೌಲಭ್ಯದ ಜೊತೆಗೆ ಇನ್ನು ಹೆಚ್ಚಿನ ಸವಲತ್ತುಗಳನ್ನು ಒದಗಿಸುವ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರವಿಚಂದ್ರ ಅವರು ಆರೋಗ್ಯ ಇಲಾಖೆಯ ಮಾಹಿತಿಗಳನ್ನು ಸಭೆಗೆ ತಿಳಿಸಿದರು. ಸಭೆಯಲ್ಲಿ ತಾಲೂಕು ಪಂಚಾಯಿತಿ ಸದಸ್ಯರಾದ ಗಣೇಶ, ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯೆ ಫಿಲೋಮಿನ, ಶಾಲಾ ಮುಖ್ಯೋಪಾಧ್ಯಾಯ ಬಿ.ಸಿ. ರಾಜು, ಎಂ.ಬಿ. ಜಯಂತ್ ಸೇರಿದಂತೆ ಸಮಿತಿಯ ಎಲ್ಲಾ ಸದಸ್ಯರುಗಳು ಹಾಜರಿದ್ದರು.