ಮಡಿಕೇರಿ, ಫೆ. 1: ಉತ್ತರಪ್ರದೇಶದ ಆಲಿಗಢದಲ್ಲಿ ಹಿಂದೂ ಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿ ಪೂಜಾ ಶಕುನ್ ಪಾಂಡೆ ಹಾಗೂ ಅವರ ಸಹಕಾರ್ಯಕರ್ತರು ನಕಲಿ ಬಂದೂಕಿನಿಂದ ರಾಷ್ಟ್ರಪಿತ ಗಾಂಧೀಜಿಯ ಪ್ರತಿಕೃತಿಗೆ ಗುಂಡಿಕ್ಕಿ ಹತ್ಯೆ ಮಾಡುವ ಮೂಲಕ ಮಹಾತ್ಮ ಗಾಂಧೀಜಿ ಹತ್ಯೆಯ ಘಟನೆಯನ್ನು ಮರುಸೃಷ್ಟಿಸಿ ಸಂಭ್ರಮಾಚರಿಸಿದ್ದನ್ನು ಖಂಡಿಸಿ ನಗರದಲ್ಲಿ ಎಸ್‍ಡಿಪಿಐ ಪ್ರತಿಭಟನೆ ನಡೆಸಿತು.