ಮಡಿಕೇರಿ, ಫೆ. 1: ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅನೀಸ್ ಕಣ್ಮಣಿ ಜಾಯ್ ಅವರು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಅಧಿಕಾರ ವಹಿಸಿ ಕೊಂಡಿದ್ದಾರೆ. ಕಳೆದ 20 ದಿನಗಳಿಂದ ಪ್ರಬಾರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯಾ ಅವರಿಂದ ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕರಿಸಿದರು.ಅನೀಸ್ ಕಣ್ಮಣಿ ಜಾಯ್ ಅವರು ಈ ಹಿಂದೆ ತುಮಕೂರು ಜಿಲ್ಲೆಯಲ್ಲಿ ಒಂದು ವರ್ಷ, ಒಂದು ತಿಂಗಳ ಕಾಲ ಜಿ.ಪಂ. ಸಿಇಒ, ನವದೆಹಲಿಯ ಕರ್ನಾಟಕ ಭವನದಲ್ಲಿ ಉಪ ಆಯುಕ್ತರಾಗಿ, ಹಾಗೆಯೇ ಬೀದರ್ ಜಿಲ್ಲೆಯಲ್ಲಿ ಒಂದು ವರ್ಷಗಳ ಕಾಲ ಉಪ ವಿಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.