ಶನಿವಾರಸಂತೆ, ಫೆ. 1: ಸಮೀಪದ ಗುಡುಗಳಲೆ ಜಾತ್ರಾ ಮೈದಾನದ ಬಸವೇಶ್ವರ ದೇವಸ್ಥಾನದಲ್ಲಿ ಶನಿವಾರಸಂತೆ ಮತ್ತು ಕೊಡ್ಲಿಪೇಟೆ ಭಕ್ತ ಸಮೂಹದ ವತಿಯಿಂದ ಸಿದ್ಧಗಂಗಾ ಮಠಾಧೀಶ, ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ. ಶಿವಕುಮಾರ ಮಹಾಸ್ವಾಮಿಗಳ ಪುಣ್ಯಸ್ಮರಣೆ ತಾ. 3 ರಂದು ಬೆಳಿಗ್ಗೆ 10.30 ಕ್ಕೆ ನಡೆಯಲಿದೆ. ವಿವಿಧ ಮಠಾಧೀಶರು ಸಾನಿಧ್ಯ ವಹಿಸಲಿದ್ದಾರೆ. ದಾಸೋಹ ವ್ಯವಸ್ಥೆಯನ್ನು ಏರ್ಪಡಿಸಲಾಗಿದೆ.