ವೀರಾಜಪೇಟೆ, ಫೆ.2: ರಸ್ತೆ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಸಂದರ್ಭ ತೋಟದ ಮಾಲೀಕರು ರಸ್ತೆಗೆ ಸೇರಿದ ಜಾಗವನ್ನು ಬಿಟ್ಟು ಕೊಟ್ಟು ಸಹಕಾರ ನೀಡುವಂತಾಗಬೇಕು ಎಂದು ವೀರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಹೇಳಿದರು.

ವೀರಾಜಪೇಟೆ ಸಮೀಪದ ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೂರಿಯಾಲು ಪೊನ್ನಂಗಾಲತಮ್ಮೆ ದೇವಸ್ಥಾನಕ್ಕೆ ಹೋಗುವ ರಸ್ತೆಗೆ ಲೋಕೊಪಯೋಗಿ ಇಲಾಖೆಯ ವಿಶೇಷ ಘಟಕದಿಂದ ರೂ. 10 ಲಕ್ಷದ ಕಾಂಕ್ರೀಟ್ ರಸ್ತೆ ಕಾಮಗಾರಿ ಹಾಗೂ ಶಾಸಕರ ವಿಶೇಷ ಅನುದಾನದಲ್ಲಿ ರೂ. 5 ಲಕ್ಷದ ಕಾಮಗಾರಿ ಡಾಂಬರೀಕರಣಗೊಂಡ ರಸ್ತೆಯನ್ನು ಉದ್ಘಾಟಿಸಿದ ಶಾಸಕ ಬೋಪಯ್ಯ ಮಾತನಾಡಿ ಪ್ರಕೃತಿ ವಿಕೋಪ ಯೋಜನೆಯಡಿಯಲ್ಲಿ ಗ್ರಾಮೀಣ ಪ್ರದೇಶದ ರಸ್ತೆ ಕಾಮಗಾರಿಗಳು ನಡೆಯುತ್ತಿದ್ದು, ಕಾಮಗಾರಿ ಕಳಪೆಯಾಗದಂತೆ ಸ್ಥಳೀಯರು ಎಚ್ಚರ ವಹಿಸಬೇಕು ಎಂದರು. ಇದಕ್ಕೂ ಮೊದಲು ಕಡಂಗ ಮರೂರು ಗ್ರಾಮದಿಂದ ಕೆದಮುಳ್ಳೂರು ರಸ್ತೆಗೆ ರೂ,15 ಲಕ್ಷದ ಡಾಂಬರೀಕರಣ ಕಾಮಗಾರಿಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ ಮಾತನಾಡಿ ಈಗಾಗಲೇ ಕೆಲವು ರಸ್ತೆಗಳ ಕಾಮಗಾರಿ ಮುಗಿದಿದ್ದು ಇನ್ನು ಉಳಿದಿರುವ ರಸ್ತೆ ಕಾಮಗಾರಿಗಳನ್ನು ಕೆಲವು ದಿನಗಳಲ್ಲಿ ಪ್ರಾರಂಭಿಸಲಾಗುವದು ಎಂದರು.

ಈ ಸಂದರ್ಭ ಗ್ರಾಮಸ್ಥರಾದ ರವಿ ಅಯ್ಯಣ್ಣ, ಸ್ಥಾನೀಯ ಸಮಿತಿಯ ಕೆ.ಕೆ. ಸುರೇಶ್, ಮದು ದೇವಯ್ಯ, ಗ್ರಾಮ ಪಂಚಾಯಿತಿ ಸದಸ್ಯ ಪರಮೇಶ್ವರ, ಕಿರಣ್ ಸಮಿತಿಯ ಕೆ.ಕೆ. ಸುರೇಶ್, ಮದು ದೇವಯ್ಯ, ಗ್ರಾಮ ಪಂಚಾಯಿತಿ ಸದಸ್ಯ ಪರಮೇಶ್ವರ, ಕಿರಣ್