ಮಡಿಕೇರಿ, ಫೆ. 2: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಿಯ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ತಾ. 5 ಮತ್ತು 6 ರಂದು ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

ಶ್ರೀ ದಂಡಿನ ಮಾರಿಯಮ್ಮ ದೇವಿಯ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವದ ಅಂಗವಾಗಿ ತಾ. 5 ರಂದು ಸಂಜೆ 5 ಗಂಟೆಯಿಂದ ಪ್ರಸಾದ ಸಿದ್ಧಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ವಿಷ್ಣು ಪೂಜೆ, ದಿಶಾ ಬಲಿ (ದಿಕ್ಪಾಲಕ ಬಲಿ), ಮಹಾ ಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.

ತಾ. 6 ರಂದು ಬೆಳಿಗ್ಗೆ 8 ಗಂಟೆಯಿಂದ ಗಣಪತಿ ಹೋಮ, ಕಲಶ ಪೂಜೆ, ಕಲಶಾಭಿಷೇಕ, ನಾಗದೇವರಿಗೆ ಪಂಚಾಮೃತಾಭಿಷೇಕ, ನಾಗಪೂಜೆ, ದೇವಿಗೆ ಅಲಂಕಾರ ಪೂಜೆ ನಡೆಯಲಿದ್ದು, ಮಧ್ಯಾಹ್ನ 12 ಗಂಟೆಗೆ ಮಹಾಪೂಜೆಯ ನಂತರ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆಯಾಗಲಿದೆ.

ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಆಡಳಿತ ಮಂಡಳಿ ವಿನಂತಿಸಿಕೊಂಡಿದೆ.

ಹೆಚ್ಚಿನ ಮಾಹಿತಿಗಾಗಿ 9449118383, 9880908099, 9480220050, 9886264390 ಸಂಪರ್ಕಿಸಬಹುದಾಗಿದೆ.